ಅರಸಿನಮಕ್ಕಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಹೆಣ್ಣು ಮಕ್ಕಳ ಶೌಚಾಲಯ ಉದ್ಘಾಟನೆ

0

ಅರಸಿನಮಕ್ಕಿ: ಸರ್ಕಾರಿ ಪ್ರೌಢಶಾಲೆ ಅರಸಿನಮಕ್ಕಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ, 2025-26ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ಹೆಣ್ಣು ಮಕ್ಕಳ ಶೌಚಾಲಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷರಾದ ಲಿಂಗಪ್ಪಗೌಡ ವಹಿಸಿದ್ದರು.ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಮಿತಿಯ ಅಧ್ಯಕ್ಷರಾದ ವಾಮನ್ ತಾಮನ್ಕರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮಯ್ಯ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಮಂಜುಳಾ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಸುಧೀರ್ ಕುಮಾರ್, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಅವಿನಾಶ್ ಬಿಢೆ, ಹತ್ಯಡ್ಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಶ್ವೇತಾ ಧರ್ಮರಾಜ ಅಡ್ಕಾರಿ, ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಮಾಜಿ ಕಾರ್ಯಾಧ್ಯಕ್ಷರಾದ ಗಣೇಶ್ ಕುಲಾಲ್, ಹಿರಿಯ ವಿದ್ಯಾರ್ಥಿ ಸಮಿತಿಯ ಉಪಾಧ್ಯಕ್ಷರಾದ ವೃಷಾಂಕ್ ಖಾಡಿಲ್ಕರ್ ಹಾಗೂ ಹಿರಿಯ ವಿದ್ಯಾರ್ಥಿ ಸಮಿತಿಯ ಸದಸ್ಯರಾದ ಶ್ರೀರಂಗ ದಾಮ್ಲೆ ಉಪಸ್ಥಿತರಿದ್ದರು.

2025-26ನೇ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ನಿರ್ಮಿಸಲಾಗಿರುವ ಹೆಣ್ಣು ಮಕ್ಕಳ ಶೌಚಾಲಯವನ್ನು ಉದ್ಘಾಟಿಸಲಾಯಿತು.ಸಭಾ ಕಾರ್ಯಕ್ರಮವನ್ನು ವಿಜ್ಞಾನ ಶಿಕ್ಷಕಿ ಚೇತನಾ ಬಿ.ಎಂ. ನಿರೂಪಿಸಿದರು. ಇಂಗ್ಲಿಷ್ ಭಾಷಾ ಶಿಕ್ಷಕಿ ಚೇತನಾ ಕುಮಾರಿ ಸ್ವಾಗತಿಸಿದರು. ಕನ್ನಡ ಶಿಕ್ಷಕಿ ಹೇಮಾವತಿ ವಂದಿಸಿದರು.ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here