







ಮೂಡುಬಿದ್ರಿ: ದ ಯೆನೆಪೋಯ ಕಾಲೇಜು, ತೋಡಾರಿನಲ್ಲಿ 80ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಅಬ್ದುಲ್ ಕರೀಮ್ ಮುಖ್ಯ ಅತಿಥಿಯಾಗಿ ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರೋತ್ಸವದ ಶುಭಾಶಯವನ್ನು ಕೋರಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಹರೀಶ್ ಶೆಟ್ಟಿ ಹಾಗೂ ಎನ್ ಎಸ್ಎಸ್, ರೋವರ್ಸ್ ಮತ್ತು ರೇಂಜರ್ಸ್, ಯೂತ್ ರೆಡ್ ಕ್ರಾಸ್ ಘಟಕಗಳ ಸಂಯೋಜಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ದೇಶಭಕ್ತಿಯನ್ನು ಸಾರುವ ಸಮೂಹ ಗೀತೆಯನ್ನು ಹಾಡಿದರು.


ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.









