






ಕೊಕ್ಕಡ, ಆ.14: ಸಂಗಮ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಮಾದರಿ ಒಕ್ಕೂಟದ (ರಿ.) ವಾರ್ಷಿಕ ಮಹಾಸಭೆ ಆ.14ರಂದು ಕೊಕ್ಕಡದ ಅಂಬೇಡ್ಕರ್ ಭವನದಲ್ಲಿ ಒಕ್ಕೂಟದ ಅಧ್ಯಕ್ಷೆ ಕುಸುಮ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಒಕ್ಕೂಟದ ಸದಸ್ಯೆ ಯೋಗೀಶ್ವರಿ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಸಭೆಯಲ್ಲಿ LCRP ಗಾಯತ್ರಿ ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ವೀಣಾಶ್ರೀ ಅವರು NRLM ಯೋಜನೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಬಳಿಕ ಒಕ್ಕೂಟದ ಅಧ್ಯಕ್ಷೆ ಕುಸುಮ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

2025-26ನೇ ಸಾಲಿನ ಒಕ್ಕೂಟದ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಅಶ್ವಿನಿ ಮಂಡಿಸಿದರು. ವರದಿಯ ಕುರಿತು ಚರ್ಚೆ ನಡೆದು ಸಭೆಯ ಅನುಮೋದನೆ ಪಡೆಯಲಾಯಿತು. ಇದೇ ವೇಳೆ 2025-26ನೇ ಸಾಲಿನ ಲೆಕ್ಕಪರಿಶೋಧನಾ ವರದಿಯನ್ನು MBK ಯಶೋಧ ಮಂಡಿಸಿ ಸಭೆಯ ಅನುಮೋದನೆ ಪಡೆದರು. 2026-27ನೇ ಸಾಲಿನ ಕ್ರಿಯಾಯೋಜನೆಯ ಕುರಿತು ಮಹಾಸಭೆಯಲ್ಲಿ ಚರ್ಚಿಸಿ, ಮುಂದಿನ ಕಾರ್ಯಯೋಜನೆಯನ್ನು ಮಂಡಿಸಲಾಯಿತು.
ಹರ್ ಘರ್ ತಿರಂಗಾ ಅಭಿಯಾನ-2026ರ ಪರಿಣಾಮಕಾರಿ ಅನುಷ್ಠಾನದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಯಿತು. ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.BRP-PRI ಶ್ರೀಕಲಾ ಅವರು ಸ್ತನ್ಯಪಾನ ಹಾಗೂ ಮಾದಕ ವ್ಯಸನದ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು. ಬಳಿಕ ಮಾದಕ ವ್ಯಸನದ ವಿರುದ್ಧ ಸಭಿಕರಿಗೆ ಪ್ರತಿಜ್ಞೆ ಮಾಡಿಸಲಾಯಿತು.


ಆರ್ಥಿಕ ಸಾಕ್ಷರತಾ ಸಮಾಲೋಚಕಿ ಉಷಾ ಕಾಮತ್ ಅವರು ಬ್ಯಾಂಕ್ಗಳಲ್ಲಿ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯ ಕುರಿತು ಸಂಕ್ಷಿಪ್ತ ವರದಿ ಮಂಡಿಸಿದ ಬಳಿಕ, ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ವಲಯ ಮೇಲ್ವಿಚಾರಕಿ ವೀಣಾಶ್ರೀ ನೆರವೇರಿಸಿದರು.
ನಿರ್ಗಮಿತ ಒಕ್ಕೂಟದ ಅಧ್ಯಕ್ಷೆ ಕುಸುಮ ಹಾಗೂ ಕಾರ್ಯದರ್ಶಿ ಅಶ್ವಿನಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಿರ್ಗಮಿತ ಸದಸ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.ಅಧ್ಯಕ್ಷೆ ಕುಸುಮ ಮಾತನಾಡಿ, ಒಕ್ಕೂಟದ ಅಧ್ಯಕ್ಷರು ಹಾಗೂ ಸದಸ್ಯರ ಜವಾಬ್ದಾರಿ ಮತ್ತು ಕರ್ತವ್ಯಗಳ ಕುರಿತು ವಿವರಿಸಿದರು.
ನೂತನ ಪದಾಧಿಕಾರಿಗಳು ಒಕ್ಕೂಟವನ್ನು ಇನ್ನಷ್ಟು ಉತ್ತಮ ರೀತಿಯಲ್ಲಿ ಮುನ್ನಡೆಸುವಂತೆ ಸಲಹೆ ನೀಡಿದ ಅವರು, ಸಂಘದ ಪ್ರತಿಯೊಬ್ಬ ಸದಸ್ಯರ ಸಹಕಾರವನ್ನು ಕೋರಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ನಲ್-ಜಲ್ ಸಿಬ್ಬಂದಿ ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು.
ಸಭೆಯಲ್ಲಿ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು, SWM ಸಿಬ್ಬಂದಿ ಹಾಗೂ ಪಂಚಾಯತ್ ಸಿಬ್ಬಂದಿ ಭಾಗವಹಿಸಿದ್ದರು.ಕೊನೆಯಲ್ಲಿ LCRP ನಮಿತಾ ಧನ್ಯವಾದ ಅರ್ಪಿಸಿದರು. ರಾಷ್ಟ್ರಗೀತೆಯೊಂದಿಗೆ ಸಭೆ ಸಮಾಪನಗೊಂಡಿತು.









