






ಲಾಯಿಲ, ಆಗಸ್ಟ್ 15, 2026: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ, ಲಾಯಿಲದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗೌರವಾನ್ವಿತ ನಿವೃತ್ತ ಸೇನಾ ಅಧಿಕಾರಿ ಶ್ರೀಯುತ ವಿಕ್ರಮ ಜೆ. ಎನ್. ಅವರು ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಗೀತೆ ಹಾಗೂ ಧ್ವಜಗೀತೆಯೊಂದಿಗೆ ಶಾಲಾ ಬ್ಯಾಂಡ್‌ನ ವಿದ್ಯಾರ್ಥಿಗಳು ಪಥಸಂಚಲನ ನಡೆಸಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.ಮುಖ್ಯ ಅತಿಥಿ ಶ್ರೀ ವಿಕ್ರಮ ಜೆ. ಎನ್. ಅವರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಹೋರಾಟ ಹಾಗೂ ದೇಶದ ರಕ್ಷಣೆಯಲ್ಲಿ ಸೈನಿಕರು ಸಲ್ಲಿಸುತ್ತಿರುವ ಅಮೂಲ್ಯ ಸೇವೆಯನ್ನು ಸ್ಮರಿಸಿ, ವಿದ್ಯಾರ್ಥಿಗಳು ದೇಶಪ್ರೇಮ, ಶಿಸ್ತು ಮತ್ತು ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯಬೇಕೆಂದು ಕರೆ ನೀಡಿದರು.


ಶಾಲಾ ಸಂಚಾಲಕಿ ರೆವ. ಸಿಸ್ಟರ್ ಎಲ್ಸಿ ಪ್ಯಾಲೆಟ್ ಅವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ದೇಶದ ಏಕತೆ ಮತ್ತು ಸೌಹಾರ್ದತೆಯನ್ನು ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬರದ್ದಾಗಿದೆ ಎಂದು ಹೇಳಿದರು.ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಂಡವು.ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕಿ ರೆವ. ಸಿಸ್ಟರ್ ಎಲ್ಸಿ ಪ್ಯಾಲೆಟ್, ಶಾಲಾ ಮುಖ್ಯೋಪಾಧ್ಯಾಯಿನಿ ರೆವ. ಸಿಸ್ಟರ್ ಪ್ರೀತಿ ಜಾರ್ಜ್, ರಕ್ಷಕ-ಶಿಕ್ಷಕ ಸಮಿತಿಯ ಅಧ್ಯಕ್ಷರಾದ ರೆಜಿ ಜಾರ್ಜ್, ಉಪಾಧ್ಯಕ್ಷೆ ಸುಮಿತ ಪೆರ್ನಾಂಡಿಸ್, ಶಾಲಾ ಸಿಬ್ಬಂದಿ ಕಾರ್ಯದರ್ಶಿ ಲಾವಣ್ಯ, ಶಾಲಾ ವಿದ್ಯಾರ್ಥಿ ನಾಯಕ ಮಾ. ಆಲ್ರನ್ ಜೋಹನ್ ಫೆರ್ನಾಂಡಿಸ್, ಶಿಕ್ಷಕ-ರಕ್ಷಕ ಸಂಘದ ಸದಸ್ಯರು, ಪೋಷಕರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕು. ಇಶ್ರಾ ಹಾಗೂ ಮಾ. ಆಂಜೋ ದೇವಸ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಕು. ನಜಾ ಫಾತಿಮಾ ಗಣ್ಯರನ್ನು ಸ್ವಾಗತಿಸಿದರು. ಕು. ನಿಶಿತಾ ಬಂಗೇರ ವಂದಿಸಿದರು.ದೇಶಭಕ್ತಿ, ಶಿಸ್ತು ಮತ್ತು ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣದೊಂದಿಗೆ ನಡೆದ ಈ ಸ್ವಾತಂತ್ರ್ಯ ದಿನಾಚರಣೆಯು ಎಲ್ಲರಲ್ಲೂ ದೇಶಪ್ರೇಮದ ಭಾವನೆಯನ್ನು ಮೂಡಿಸಿ, ಸ್ಮರಣೀಯವಾಗಿ ನೆರವೇರಿತು.









