ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು – ಪದವಿ ಪ್ರದಾನ ಎಲ್ಲಾ ವೈದ್ಯ ಚಿಕಿತ್ಸಾ ಪದ್ಧತಿ ಒಂದೇ ಕಡೆ ದೊರೆಯಲಿ: ಕೇಜ್ರಿವಾಲ್

 da 1 da kejri in dharmasthala 1 kejri in dharmasthala 2 kejrival in dharmasthala 1 kejrival in dharmasthala Kejriyinda hostel udgatane Kejriyinda padavi pradanaಧರ್ಮಸ್ಥಳ : ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ, ಹೋಮಿಯೋಪತಿ, ಮತ್ತು ಅಲೋಪತಿ ಮೊದಲಾದ ವೈದ್ಯ ಚಿಕಿತ್ಸಾ ಪದ್ಧತಿಗಳು ಒಂದೇ ಆಸ್ಪತ್ರೆಯಲ್ಲಿ ದೊರೆತರೆ ರೋಗಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ವಿಶ್ವದಲ್ಲೇ ಪ್ರಥಮವಾಗಿ ಇಂತಹ ನೂತನ ಘಟಕವನ್ನು ಡಾ| ಹೆಗ್ಗಡೆಯವರು ದೆಹಲಿಯಲ್ಲಿ ಆರಂಭಿಸಿದರೆ, ನಮ್ಮ ಸರಕಾರ ಪೂರ್ಣ ಸಹಕಾರ ನೀಡುವುದಾಗಿ ದೆಹಲಿಯ ಮುಖ್ಯ ಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದರು.
ಅವರು ಸೆ.೯ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಬಿ.ಎಸ್.ವೈ.ಎಸ್. ಪದವಿ ಅಧ್ಯಯನ ಮಾಡಿದ ೫೪ ಮಂದಿ ಮತ್ತು ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಸ್ನಾತಕೋತ್ತರ ಪದವಿ ಪೂರೈಸಿದ ೧೦ ಮಂದಿಗೆ ಪದವಿ ಪ್ರದಾನ ಮಾಡಿ ಮಾತನಾಡಿದರು.
ವೈದ್ಯಕೀಯ ಪದವಿ ಪಡೆದವರು ತಮ್ಮ ವೃತ್ತಿ ಜೀವನದಲ್ಲಿ ಅನೇಕ ಸವಾಲು-ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದರೆ ಎಂದೂ ಆತ್ಮವಂಚನೆ ಮಾಡದೇ ಪ್ರಾಮಾಣಿಕತೆ ಹಾಗೂ ಮಾನವೀಯತೆಯಿಂದ ಸೇವೆ ಮಾಡಿದಾಗ ಜೀವನದಲ್ಲಿ ತೃಪ್ತಿಯನ್ನು ಪಡೆಯಲು ಸಾಧ್ಯವಿದೆ ಎಂದರು. ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಇದು ಶುಭ ದಿನ. ನಿಮಗೆ ದೊಡ್ಡ ಜವಾಬ್ದಾರಿ ಇದೆ. ಜೀವನದಲ್ಲಿ ಸಮಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಸಮಯ ದಾನ ಎಲ್ಲಾ ದಾನಕ್ಕಿಂತ ಶ್ರೇಷ್ಠವಾದುದು. ಸ್ವಲ್ಪ ಸಮಯವನ್ನು ಸಮಾಜ ಸೇವೆಗಾಗಿ ದಾನ ಮಾಡಿ ಎಂದು ಕಿವಿ ಮಾತು ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರು ಬಡವರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದ್ದಾರೆ. ಮಾನವ ಕಲ್ಯಾಣಕ್ಕಾಗಿ ಅವರು ಮಾಡುತ್ತಿರುವ ಸೇವೆ ಎಲ್ಲರಿಗೂ ಮಾದರಿಯಾಗಿದೆ. ನಾವು ಜೀವನದಲ್ಲಿ ಗಳಿಸಿದ ಆದಾಯದಲ್ಲಿ ಒಂದು ಅಂಶವನ್ನು ಸಮಾಜಕ್ಕಾಗಿ ವಿನಿಯೋಗಿಸಬೇಕು. ಇದರಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ದೊರೆಯುತ್ತದೆ ಎಂದು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ ಪ್ರಕೃತಿಯಲ್ಲಿದ್ದು, ಔಷಧಿ ರಹಿತ ಪಂಚಭೂತಗಳ ಚಿಕಿತ್ಸೆಯೇ ಪ್ರಕೃತಿ ಚಿಕಿತ್ಸೆಯಾಗಿದೆ. ಈ ಚಿಕಿತ್ಸೆಯಿಂದ ಜೀವನದಲ್ಲಿ ನೆಮ್ಮದಿಯನ್ನು ಕಾಣಬಹುದು, ಸಚಿವ ಖಾದರ್ ಮತ್ತು ಮುಖ್ಯ ಮಂತ್ರಿಯವರು ಕೂಡ ಇಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಲ್ಲಿ ಒಳ್ಳೆಯ ಸೇವೆ ದೊರೆಯುತ್ತಿದೆ ಎಂದರು. ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ೧೯೮೯ರಲ್ಲಿ ಈ ಆಸ್ಪತ್ರೆಯನ್ನು ತೆರೆಯಲಾಗಿದ್ದು, ಈಗ ೫೦೦ ಹಾಸಿಗೆ ಸಾಮಥ್ಯವನ್ನು ಹೊಂದಿದೆ ಎಂದರು.
ಕೇಜ್ರಿವಾಲ್ ಅವರ ಬೇಡಿಕೆಯಂತೆ ದೆಹಲಿಯಲ್ಲಿ ಎಲ್ಲಾ ಚಿಕಿತ್ಸಾ ಪದ್ಧತಿಗಳ ವೈದ್ಯಕೀಯ ಸಲಹಾ ಕೇಂದ್ರವನ್ನು ಆರಂಭಿಸಲಾಗುವುದು. ಇಲ್ಲಿ ರೋಗಿಗಳನ್ನು ಪರೀಕ್ಷೆ
ಮಾಡಿ ಅವರ ವಯಸ್ಸು ಮತ್ತು ಸಮಸ್ಯೆಯನ್ನು ಗುರುತಿಸಿ ಯಾವ ಚಿಕಿತ್ಸಾ ಪದ್ಧತಿ ಉತ್ತಮ ಎಂಬ ಬಗ್ಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಮಾತನಾಡಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸುಮಾರು ೨೫ ವರ್ಷಗಳ ಹಿಂದೆಯೇ ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯನ್ನು ತೆರೆದು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇಲ್ಲಿಗೆ ದೇಶದಾದ್ಯಂತದಿಂದ ಜನರು ಬರುತ್ತಿದ್ದಾರೆ. ಇಲ್ಲಿ ಉತ್ತಮ ಸೇವೆ ದೊರೆಯುತ್ತದೆ ಎಂದರು. ಪದವಿ ಪೂರೈಸಿದ ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ವೈದ್ಯರಾಗಿ ಹೆಸರು ಪಡೆಯಬೇಕು. ಜನರ ನಡುವೆ ಭಾವನಾತ್ಮಕ ಸಂಬಂಧವಿಟ್ಟು, ರೋಗಿಗಳ ಸಮಸ್ಯೆಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕು ಪ್ರವಾಸೋದ್ಯಮ ಇಲಾಖೆ ಮೂಲಕ ಆಯುಷ್ ಇಲಾಖೆ ಮೂಲಕ ನಮ್ಮ ಪಾರಂಪರಿಕ ಚಿಕಿತ್ಸಾ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಉಜಿರೆಯಲ್ಲಿ ನೂತನ ಹಾಸ್ಟೇಲ್ ನಿರ್ಮಾಣದ ಇಂಜಿನಿಯರ್ ಅನಂತರಾಮ್, ಗೋಪಾಲ ಮೆನನ್, ಜಗದೀಶ್ ಪ್ರಸಾದ್ ಇವರನ್ನು ಹೆಗ್ಗಡೆಯವರು ಗೌರವಿಸಿದರು. ವೇದಿಕೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್, ಉಪಾಧ್ಯಕ್ಷರಾದ ಪ್ರೋ.ಎಸ್. ಪ್ರಭಾಕರ್, ಡಾ| ಪ್ರಶಾಂತ ಶೆಟ್ಟಿ, ಶಾಂತಿವನದ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ ಉಪಸ್ಥಿತರಿದ್ದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಯಶೋವರ್ಮ ಸ್ವಾಗತಿಸಿದರು. ಯೋಗ ತೆರಾಪಿ ವಿಭಾಗದ ಮುಖ್ಯಸ್ಥ ಡಾ. ಶಿವಪ್ರಸಾದ ಶೆಟ್ಟಿ ವಂದಿಸಿದರು.
ನೂತನ ಹಾಸ್ಟೇಲ್ ಉದ್ಘಾಟನೆ
ಸಭೆಯ ಬಳಿಕ ಅರವಿಂದ ಕೇಜ್ರಿವಾಲ್ ಅವರು ಉಜಿರೆ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಪ್ರಕೃತಿ ಹಾಸ್ಟೇಲ್‌ನ್ನು ಉದ್ಘಾಟಿಸಿದರು. ಈ ಸಂದರ್ಭ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಡಾ. ಯಶೋವರ್ಮ ಮೊದಲಾದವರು ಉಪಸ್ಥಿತರಿದ್ದರು.

ಅಕ್ಟೋಬರ್ ಒಳಗೆ ಲೋಕಪಾಲ್ ಮಸೂದೆ ಜಾರಿ
ದಿಲ್ಲಿಯಲ್ಲಿ ಇದೇ ಅಕ್ಟೋಬರ್ ತಿಂಗಳೊಳಗೆ ಲೋಕಪಾಲ್ ಮಸೂದೆ ಜಾರಿಗೆ ತರಲಾಗವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ. ಧರ್ಮಸ್ಥಳದಲ್ಲಿ ಶ್ರೀ ಸನ್ನಿಧಿ ಗೃಹದಲ್ಲಿ ಸೆ.೯ರಂದು ಅವರು ಮಾಧ್ಯಮದವರು ಮತ್ತು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿದರು. ಸರ್ಕಾರದ ವಿವಿಧ ಯೋಜನೆಗಳಿಗೆ ಭೂಮಿ ವಶಪಡಿಸಿಕೊಳ್ಳುವಾಗ ಸೂಕ್ತ ಪರಿಹಾರ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಚಿತ್ರ: ಜನನಿ ಧರ್ಮಸ್ಥಳ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.