






ಮಾಲಾಡಿ : ಸ. ಉ. ಪ್ರಾ. ಶಾಲೆ, ಮಾಲಾಡಿಯಲ್ಲಿ ಆ.18 ರಂದು ಪೋಷಕ ರಕ್ಷಕ ಸಭೆ ಮತ್ತು ಊರದಾನಿಗಳಿಗೆ ಸನ್ಮಾನ ನೆರವೇರಿತು.

ಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿ, ಹಾಜರಾತಿ, ಶಿಸ್ತು, ಸ್ವಚ್ಛತೆ, ಆರೋಗ್ಯ, ವೈಯಕ್ತಿಕ ಬೆಳವಣಿಗೆ ಹಾಗೂ ಎಫ್.ಎ. 1 ಪರೀಕ್ಷೆ ಫಲಿತಾಂಶದ ಕುರಿತು ಪೋಷಕರೊಂದಿಗೆ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ಚರ್ಚಿಸಿದರು.


ಶಾಲೆಯ ಶೈಕ್ಷಣಿಕ ಹಾಗೂ ಭೌತಿಕ ಅಭಿವೃದ್ಧಿಗೆ ಸದಾ ಬೆಂಬಲವಾಗಿ ನಿಂತು ಅಗತ್ಯ ಸಂದರ್ಭದಲ್ಲಿ ವಿವಿಧ ರೀತಿಯ ಸಹಕಾರ, ದೇಣಿಗೆ ಹಾಗೂ ಶೈಕ್ಷಣಿಕ ಸಾಮಗ್ರಿಗಳನ್ನು ಒದಗಿಸುತ್ತಿರುವ ಊರದಾನಿಗಳಾದ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಮತ್ತು ನಿತ್ಯಾನಂದ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾರಂಕಿ ವಲಯದ ಮೇಲ್ವಿಚಾರಕ ಕೇಶವ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಹಕೀಂ, ಉಪಾಧ್ಯಕ್ಷೆ ಶೋಭ ಮತ್ತು ಶಾಲಾ ಮುಖ್ಯ ಶಿಕ್ಷಕಿ ಜುಲಿಯಾನ ಶಾಲಿನಿ ಬರೆಟ್ಟೊ ಉಪಸ್ಥಿತರಿದ್ದರು.
ಗೌರವ ಶಿಕ್ಷಕಿ ಚೈತ್ರಾ ಕಾರ್ಯಕ್ರಮಕ್ಕೆ ಸ್ವಾಗತಿಸಿ, ದಿವ್ಯ ವಂದಿಸಿದರು ಹಾಗೂ ಗೌರವ ಶಿಕ್ಷಕಿ ಮಮತಾ ಕೆ ಕಾರ್ಯಕ್ರಮವನ್ನು ನಿರೂಪಿಸಿದರು.









