ಉಜಿರೆ: ಎಸ್.ಡಿ.ಎಂ. ಪಿ ಯು ಕಾಲೇಜಿನಲ್ಲಿ ಸದ್ಭಾವನಾ ದಿನ

0

ಉಜಿರೆ :ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಸದ್ಭಾವನಾ ದಿನ ಆಚರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಉಪ ಪ್ರಾಂಶುಪಾಲ ಡಾ. ರಾಜೇಶ್ ಬಿ.ಮಾತನಾಡಿ “ಜಾತಿ, ಧರ್ಮ, ಭಾಷೆ ಎಲ್ಲರೂ ಒಗ್ಗೂಡಿ ಬದುಕುವುದೇ ಸದ್ಭಾವನೆ. ಎಲ್ಲರೊಂದಿಗೂ ಬೆರೆತು ಬದುಕಿದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ “ಎಂದು ಹೇಳಿದರು.

ಎಲ್ಲಾ ಸ್ವಯಂ ಸೇವಕರು ಸದ್ಭಾವನಾ ದಿನದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್., ಸಹ ಯೋಜನಾಧಿಕಾರಿ ಶೋಭಾ ಉಪಸ್ಥಿತರಿದ್ದರು. ಸ್ವಯಂ ಸೇವಕ ಕಾರ್ತಿಕ್ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here