ಬೆಂದ್ರಾಳದಲ್ಲಿ ಶಾರ್ಟ್ ಸರ್ಕ್ಯೂಟ್‌ಗೆ ದಿನಸಿ ಅಂಗಡಿ ಬೆಂಕಿಗಾಹುತಿಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಿಂದ ಸ್ಥಳಕ್ಕೆ ಭೇಟಿ

0

ಚಾರ್ಮಾಡಿ: ಚಾರ್ಮಾಡಿ ಗ್ರಾಮದ ಬೆಂದ್ರಾಳದಲ್ಲಿ ಬುಧವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ದಿನಸಿ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ.

ಬೆಂದ್ರಾಳ ನಿವಾಸಿ ಶರೀಫ್ ಅವರಿಗೆ ಸೇರಿದ ದಿನಸಿ ಅಂಗಡಿ ಬೆಂಕಿಗಾಹುತಿಯಾಗಿದ್ದು, ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾಗೂ ಸಾಮಗ್ರಿಗಳು ಹಾನಿಗೊಳಗಾಗಿವೆ.

ಘಟನಾ ಸ್ಥಳಕ್ಕೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೆಬಾಸ್ಟಿಯನ್ ಪಿ.ಸಿ. ಮುಂಡಾಜೆ, ಉಪಾಧ್ಯಕ್ಷರಾದ ಜೋಬಿ ಮಾಚಾರ್ ಹಾಗೂ ಚಾರ್ಮಾಡಿ ಪಂಚಾಯತ್ ಮಾಜಿ ಸದಸ್ಯರಾದ ಫ್ರಾನ್ಸಿಸ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here