







ಬೆಳ್ತಂಗಡಿ : ಪಶ್ಚಿಮ ಘಟ್ಟಗಳ ರಕ್ಷಣೆಗಾಗಿ ಕೇಂದ್ರ ಸರ್ಕಾರ ಹೊರಡಿಸಿರುವ ಡಾ.ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆಯನ್ನು ಸಂಪೂರ್ಣ ತಿರಸ್ಕರಿಸಲು ರಾಜ್ಯ ಸರ್ಕಾರ ಕೈಗೊಂಡ ನಿರ್ಧರ ಸ್ವಾಗತರ್ಹ ಎಂದು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಆ. 20ರಂದು ನಿಯಮ 69 ರಡಿ ಕೇಂದ್ರ ಸರ್ಕಾರದ ಏಳನೇ ಕರಡು ಅಧಿಸೂಚನೆ ತಿರಸ್ಕರಿಸುವಂತೆ ಶಾಸಕರು ಒತ್ತಾಹಿಸಿದರು.ಪಶ್ಚಿಮ ಘಟ್ಟ ಹಾಗೂ ಮಲೆನಾಡು ಭಾಗದ ನಿವಾಸಿಗಳು, ರೈತರ ಮೇಲೆ ಈ ವರದಿ ಬೀರುವ ಮಾರಕ ಪರಿಣಾಮ ಬೀರಲಿದೆ. ಕಸ್ತೂರಿ ರಂಗನ್ ವರದಿ ಜಾರಿಯಾದರೆ ಸ್ಥಳೀಯರ ಜೀವನಾಧಾರಿತ ಕೃಷಿ, ತೋಟಗಾರಿಕೆ, ಮನೆ ನಿರ್ಮಾಣ ಹಾಗೂ ಅಗತ್ಯ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿ ಉಂಟಾಗಲಿದೆ.


ಇದರಿಂದ ಈ ಭಾಗದ ಜನರು ಸಂಕಷ್ಟಕ್ಕೆ ಸಿಲುಕಲಿದ್ದು, ಸರ್ಕಾರ ಯಾವುದೇ ಕಾರಣಕ್ಕೂ ಅಧಿಸೂಚನೆ ಒಪ್ಪಬಾರದು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ರಾಜ್ಯ ಸರ್ಕಾರದಿಂದ ಶಿಫಾರಸು ಮಾಡುತ್ತೇವೆ ಎಂದು ಘೋಷಿಸಿದರು.
“ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆಗೆ ಕಾನೂನಾತ್ಮಕವಾಗಿ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಲಾಗಿದೆ. ಮಲೆನಾಡು ಭಾಗದ ಜನರ ಹಿತರಕ್ಷಣೆ ಮತ್ತು ಪರಿಸರದ ಸಮತೋಲನ ಕಾಯ್ದುಕೊಳ್ಳುವುದು ನಮ್ಮ ಜವಾಬ್ದಾರಿ.
ಹೀಗಾಗಿ ರಾಜ್ಯ ಸರ್ಕಾರವು ನಿಗದಿತ ಕಾಲಮಿತಿಯೊಳಗೆ ಸೂಕ್ತ ಆಕ್ಷೇಪಣೆ ದಾಖಲಿಸಿ, ಕೇಂದ್ರದ ಅಧಿಸೂಚನೆಯನ್ನು ಅಧಿಕೃತವಾಗಿ ತಿರಸ್ಕರಿಸಿರುವುದು ಸ್ವಾಗತರ್ಹ ಎಂದು ನಾಗೇಶ್ ಕುಮಾರ್ ಗೌಡ ತಿಳಿಸಿದರು.









