






ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುನಾರಾಯಣ ಸೇವಾ ಸಂಘ, ಬಿಲ್ಲವ ಮಹಿಳಾ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಆ 21 ರಂದು ಬೆಳ್ತಂಗಡಿ ಶ್ರೀ ನಾರಾಯಣ ಗುರು ಸಭಾ ಭವನದಲ್ಲಿ 23ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಲಲಿತ ಸಹಸ್ರನಾಮ ಪಾರಾಯಣ,
ಶ್ರೀ ದೇವಿ ಅಷ್ಟೋತ್ತರ ಪಾರಾಯಣ ಭಜನಾ ಕಾರ್ಯಕ್ರಮ ಮಹಿಳಾ ಬಿಲ್ಲವ ವೇದಿಕೆಯ ಸದಸ್ಯರಿಂದ ನಡೆಯಿತು.
ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಸೋಲೂರು ಮಠದ ಪೀಠಾಧೀಶ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ಗೈದರು.


ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷರು ಗೆಜ್ಜೆಗಿರಿ ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ
ಬಿಲ್ಲವ ಮಹಿಳಾ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜಿತಾ ವಿ. ಬಂಗೇರ, ಅಧ್ಯಕ್ಷೆ ಸುಮತಿ ಪ್ರಮೋದ್, ಶ್ರೀಗುರು ನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ,ಪ್ರಧಾನ ಕಾರ್ಯದರ್ಶಿ ನಿತೇಶ್ ಹೆಚ್. ಸಂಘದ ನಿರ್ದೇಶಕರು, ಬಿಲ್ಲವ ಮಹಿಳಾ ವೇದಿಕೆಯ ಮಾಜಿ ಅಧ್ಯಕ್ಷರುಗಳು ಪದಾಧಿಕಾರಿಗಳು,
ವ್ರತಧಾರಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.









