ವಿದ್ಯಾರ್ಥಿನಿಯ ಅತ್ಯಾಚಾರ: ಚಾಲಕ ಜಮಾಲುದ್ದೀನ್ ಬಂಧನ

0

ಬೆಳ್ತಂಗಡಿ: ಪೋಕ್ಸೋ ಕಾಯ್ದೆಯಡಿ ರಿಕ್ಷಾ ಚಾಲಕನನ್ನು ವೇಣೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.ಅಪ್ರಾಪ್ತ ಪ್ರಾಯದ ಸಂತ್ರಸ್ಥ ಬಾಲಕಿ (14) ಕೆಲವು ತಿಂಗಳುಗಳಿಂದ ವೇಣೂರು ನಿವಾಸಿ ಜಮಾಲುದ್ದೀನ್ ಎಂಬಾತನ ರಿಕ್ಷಾದಲ್ಲಿ ಶಾಲೆಗೆ ಹೋಗಿ ಬರುತ್ತಿದ್ದಳು. ಈ ವೇಳೆ ಜಮಾಲುದ್ದೀನ್ ಅನುಚಿತವಾಗಿ ವರ್ತಿಸುತ್ತಿದ್ದ. ಈ ಬಗ್ಗೆ ಬಾಲಕಿ ಪ್ರತಿರೋಧಿಸಿದಾಗ ಜಮಾಲುದ್ದೀನ್ ಜೀವಬೆದರಿಕೆ ಒಡ್ಡಿದ್ದಾನೆ. ಇದರಿಂದಾಗಿ ಹೆದರಿದ್ದ ಬಾಲಕಿ ಆತನ ವರ್ತನೆಯ ಬಗ್ಗೆ ಯಾರಿಗೂ ತಿಳಿಸಿಲ್ಲ.

ಆ.13ರಂದು ಸಂಜೆ ಬಾಲಕಿ ಆಕೆಯ ಮನೆಯಲ್ಲಿ ಒಬ್ಬಳೇ ಇದ್ದಾಗ ಮನೆಗೆ ಬಂದ ಜಮಾಲುದ್ದೀನ್ ಆಕೆಯನ್ನು ಬೆದರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಆ. 15ರಂದು ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣಾ ಅ.ಕ್ರ: 56/2026 ಕಲಂ: 75(2), 64(1), 65(1), 351(3) BNS 2023 ಮತ್ತು ಕಲಂ: 4(2), 8, 12 ಪೋಕ್ಸೋ ಕಾಯಿದೆ- 2012 ರಂತೆ ಪ್ರಕರಣ ದಾಖಲಾಗಿದೆ. ಆರೋಪಿ‌ ಜಮಾಲುದ್ದೀನನ್ನು ಆ.15ರಂದು ಬಂಧಿಲಾಗಿದೆ.‌ ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

LEAVE A REPLY

Please enter your comment!
Please enter your name here