ಅಳದಂಗಡಿ ಬರಾಯಕೆರೆ ಬಳಿ ಗಣಿಗಾರಿಕೆ: ತಹಶೀಲ್ದಾರ್ ಸ್ಥಳ ಪರಿಶೀಲನೆ

0

ಅಳದಂಗಡಿ: ಗ್ರಾ.ಪಂ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಬಳಿ ನಡೆಯುತ್ತಿರುವ ಕಪ್ಪು ಕಲ್ಲಿನ ಗಣಿಗಾರಿಕೆ ಕುರಿತು ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಬೆಳ್ತಂಗಡಿ ತಹಶೀಲ್ದಾರ್ ಎನ್.ಎಸ್.ನರಗುಂದ ಇಂದು (ಆ.21) ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳೀಯ ಭೂಮಾಲೀಕ ಹಾಗೂ ನ್ಯಾಯವಾದಿ ಶ್ರೀಕಾಂತ್ ಭಟ್ ಅವರು ಕೃಷಿ ಚಟುವಟಿಕೆ ನೆಪದಲ್ಲಿ ಕಳೆದ 25 ವರ್ಷಗಳಿಂದ ಸತತವಾಗಿ ಗಣಿಗಾರಿಕೆ ನಡೆಸುತ್ತಿದ್ದು, ಅಕ್ರಮವಾಗಿ ಸ್ಫೋಟಕ ಸ್ಫೋಟಿಸುತ್ತಿದ್ದಾರೆ. ಇದರಿಂದ ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಸ್ಥಳೀಯರ ಮನೆಗಳಲ್ಲಿ ಬಿರುಕು ಬಿಟ್ಟಿದ್ದು, ಕೃಷಿಗೆ ಕಲ್ಲು-ಧೂಳಿನಿಂದ ಹಾನಿಯಾಗಿದೆ.

ಬೃಹತ್ ಲಾರಿಗಳ ಸಂಚಾರದಿಂದ ಗ್ರಾ.ಪಂ ರಸ್ತೆ, ಮೋರಿಗಳು ನಾಶವಾಗಿದ್ದು, ಐತಿಹಾಸಿಕ ಕೆರೆ ಸಂಪೂರ್ಣ ಕಲುಷಿತಗೊಂಡಿದೆ ಎಂದು ಸಾರ್ವಜನಿಕರು ತಹಶೀಲ್ದಾರ್ ಎದುರು ಅಳಲು ತೋಡಿಕೊಂಡರು.ಈ ಸಂದರ್ಭದಲ್ಲಿ ಮತ್ತೊಮ್ಮೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಜೊತೆ ಭೇಟಿ ನೀಡುವುದಾಗಿ ತಹಶೀಲ್ದಾರ್ ಭರವಸೆ ನೀಡಿದರು.

ತಹಶೀಲ್ದಾರ್ ಜೊತೆ ವೇಣೂರು ಹೋಬಳಿ ಕಂದಾಯ ನಿರೀಕ್ಷಕ ಕುಮಾರಸ್ವಾಮಿ, ಅಳದಂಗಡಿ ಗ್ರಾ.ಪಂ ಕಾರ್ಯದರ್ಶಿ ಪೂವಪ್ಪ ಮಲೆಕುಡಿಯ, ಪಿಲ್ಯ ಗ್ರಾಮಕರಣಿಕ ಭಾರತಿ ಇದ್ದರು.ಮಾಜಿ ತಾ.ಪಂ ಸದಸ್ಯ ಪ್ರಶಾಂತ್ ವೇಗಸ್, ಸಮಿತಿ ಮುಖಂಡರಾದ ಲಿಯೋ ಪಿರೇರಾ, ಹರೀಶ್ ಪೂಜಾರಿ, ಗಣೇಶ್ ದೇವಾಡಿಗ, ಮೆಲ್ವಿನ್ ಡಿಸೋಜ, ಪ್ರವೀಣ್ ನಿನ್ನಿಕಲ್ಲು, ಜೋನ್ ಡಿಸೋಜ, ದಿನೇಶ್ ಪೂಜಾರಿ, ಪ್ರಶಾಂತ್ ಪೂಜಾರಿ ಕೂಸ ಅಳದಂಗಡಿ ಮತ್ತಿತರರು.

LEAVE A REPLY

Please enter your comment!
Please enter your name here