






ಸೌತಡ್ಕ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಳೆಗಾಲದಲ್ಲಿ ಆಗಮಿಸುವ ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಬ್ಯಾಂಕ್ ಆಫ್ ಬರೋಡಾ ವತಿಯಿಂದ ₹5 ಲಕ್ಷ ವೆಚ್ಚದಲ್ಲಿ ನಿರ್ಮಿಸಿಕೊಡಲಾದ ರೂಫಿಂಗ್ ಟ್ರಾಲಿಯನ್ನು ಲೋಕಾರ್ಪಣೆಗೊಳಿಸಲಾಯಿತು.



ಕಾರ್ಯಕ್ರಮದಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಯಾಂಕ್ ಆಫ್ ಬರೋಡಾ ಪುತ್ತೂರು ವಿಭಾಗದ ಎಜಿಎಂ ಯೋಗೀಶ್, ಆರ್ಒ ಭರತ್ ಶೆಟ್ಟಿ, ಶಿಶಿಲ ಶಾಖಾಧಿಕಾರಿ ಯೋಗೀಶ್, ಶಾಖಾ ಪ್ರಬಂಧಕ ರಾಜು ಗುಟಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಕಾರ್ಯನಿರ್ವಹಣಾಧಿಕಾರಿ ಏಸುರಾಜ್, ಸಮಿತಿ ಸದಸ್ಯರಾದ ಪ್ರಶಾಂತ್ ಮಚ್ಚಿನ, ವಿಶ್ವನಾಥ ಕೊಲ್ಲಾಜೆ, ಪ್ರಮೋದ್ ಕುಮಾರ್ ರೆಖ್ಯ, ಗಣೇಶ ಕಾಶಿ, ಲೋಕೇಶ್ವರಿ ವಿನಯಚಂದ್ರ, ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ, ಅರ್ಚಕರಾದ ಸುಬ್ರಹ್ಮಣ್ಯ ತೊಡ್ತಿಲ್ಲಾಯ, ಮಾಜಿ ಸದಸ್ಯ ಗಣೇಶ ಪಿ.ಕೆ., ಪ್ರಶಾಂತ್ ರೈ ಅರಂತಬೈಲು, ವಿಶ್ವನಾಥ ಶೆಟ್ಟಿ ಹಾಗೂ ದೇವಳದ ಸಿಬ್ಬಂದಿ ಉಪಸ್ಥಿತರಿದ್ದರು.ಮಳೆಗಾಲದಲ್ಲಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಮಳೆಯಿಂದ ರಕ್ಷಣೆ ಹಾಗೂ ಸುಗಮ ಸಂಚಾರಕ್ಕೆ ಈ ರೂಫಿಂಗ್ ಟ್ರಾಲಿ ಸಹಕಾರಿಯಾಗಲಿದೆ.










