







ಮುಂಡಾಜೆ:ಕಳೆದ ಆರ್ಥಿಕ ವರ್ಷದಲ್ಲಿ ಅತ್ಯುತ್ತಮ ಆರ್ಥಿಕ ಪ್ರಗತಿ ಸಾಧಿಸಿರುವ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಶೇ. 100ರಷ್ಟು ಸಾಲ ವಸೂಲಾತಿ ಮಾಡುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ.



ಈ ವಿಶೇಷ ಸಾಧನೆಯನ್ನು ಗುರುತಿಸಿ, ಆ. 22 ರಂದು ನಡೆದ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್ನ ವಾರ್ಷಿಕ ಮಹಾಸಭೆಯಲ್ಲಿ ಸಂಘಕ್ಕೆ ‘ಶೇ.100 ಸಾಲ ವಸೂಲಾತಿ ಸಾಧನಾ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಸಂಘದ ನಿರ್ದೇಶಕರ ಉಪಸ್ಥಿತಿಯಲ್ಲಿ, ಮುಂಡಾಜೆ ಪ್ಯಾಕ್ಸ್ (PACS) ಅಧ್ಯಕ್ಷರಾದ ಪ್ರಕಾಶ್ ನಾರಾಯಣ ಕೆ. ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಪ್ರಸನ್ನ ಪರಾಂಜಪೆ ಅವರು ಗಣ್ಯರ ಹಸ್ತದಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದರು









