ಗೀತ ಗಾಯನ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಬಹುಮಾನ

0

ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಸ್ಥಳೀಯ ಸಂಸ್ಥೆ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಎಸ್.ಡಿ.ಎಂ ಪದವಿಪೂರ್ವ ಕಾಲೇಜು, ಉಜಿರೆ ಇವರ ಜಂಟಿ ಆಶ್ರಯದಲ್ಲಿ ಆಗಸ್ಟ್ 23ರಂದು ಉಜಿರೆಯ ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಯ ಶಾಲೆಗಳ ಸ್ಕೌಟ್ಸ್–ಗೈಡ್ಸ್ ಹಾಗೂ ಕಬ್ಸ್–ಬುಲ್‌ಬುಲ್ ವಿದ್ಯಾರ್ಥಿಗಳಿಗಾಗಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದರು. ಗೈಡ್ಸ್ ವಿಭಾಗದಲ್ಲಿ ಪ್ರಥಮ ಸ್ಥಾನ, ಕಬ್ಸ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಬುಲ್‌ಬುಲ್ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.ಗೈಡ್ಸ್ ಹಾಗೂ ಕಬ್ಸ್ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿಜೇತ ವಿದ್ಯಾರ್ಥಿಗಳು ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿ, ಮುಂದಿನ ಹಂತದಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭಹಾರೈಸಿದರು.

LEAVE A REPLY

Please enter your comment!
Please enter your name here