ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ

0

ಬೆಳ್ತಂಗಡಿ : ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ (ರಿ.), ಲಾಯಿಲ, ಬೆಳ್ತಂಗಡಿ ಇದರ ವತಿಯಿಂದ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನ ಮಹೋತ್ಸವವು 2026ರ ಆಗಸ್ಟ್‌ 29ರಿಂದ 31ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಇದರ ಪ್ರಯುಕ್ತ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಲು ಅವರ ಆಶೀರ್ವಾದವನ್ನು ಕೋರಲಾಯಿತು.

ಈ ಸಂದರ್ಭದಲ್ಲಿ ಡಾ. ವೀರೇಂದ್ರ ಹೆಗ್ಗಡೆಯವರು ಆರಾಧನ ಮಹೋತ್ಸವದ ಕುರಿತು ಸಂಪೂರ್ಣ ಮಾಹಿತಿಯನ್ನು ವಿಚಾರಿಸಿ, ಕಾರ್ಯಕ್ರಮದ ಯಶಸ್ಸಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಹಾಗೂ ತಮ್ಮ ಆಶೀರ್ವಾದವನ್ನು ನೀಡಿದರು.

ಈ ವೇಳೆ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ, ಕಾರ್ಯದರ್ಶಿ ವಸಂತ ಸುವರ್ಣ, ಕೋಶಾಧಿಕಾರಿ ಶ್ರವಣ್ ರಾಜ್, ಉತ್ಸವ ಸಮಿತಿ ಸದಸ್ಯರಾದ ನಾರಾಯಣ ಮೆಚ್ಚಿನ, ನಿತ್ಯಾನಂದ ನಾವರ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here