ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಗುರುಜಯಂತಿ, ಸಾಧಕರಿಗೆ ಸನ್ಮಾನ, ವಿದ್ಯಾರ್ಥಿವೇತನ ವಿತರಣೆ

0

ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ, ಹಾಗೂ ಬಿಲ್ಲವ ಮಹಿಳಾ ವೇದಿಕೆ, ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಗುರುಜಯಂತಿ, ಸಮಾಜದ ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ, ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಆ. 28ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಫು ವಹಿಸಿದ್ದರು.ಕಾರ್ಯಕ್ರಮವನ್ನು ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಉದ್ಘಾಟಿಸಿ ಶುಭ ಹಾರೈಸಿದರು.ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ. ದೀಕ್ಷಿತಾ, ಹುಬ್ಬಳ್ಳಿ ಗ್ರೂಪ್ ಆಫ್ ಹೋಟೆಲ್ ಪಂಜುರ್ಲಿಯ ವಿಜಯ ಪಿ. ಪೂಜಾರಿ ಭಾಗವಹಿಸಿದ್ದರು.

ಕಾ ನಿರೂಪಕ ನಿತೇಶ್ ಪೂಜಾರಿ ಮಾರ್ನಾಡು ಗುರು ಸಂದೇಶ ನೀಡಿದರು.ಶೈಕ್ಷಣಿಕ ಸಾಧಕರಿಗೆ ಗೌರವಾರ್ಪಣೆಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ರಾಜ್ಯ ಮಟ್ಟ, ಜಿಲ್ಲಾ ಮಟ್ಟ, ತಾಲೂಕು ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ತಾಲೂಕಿನಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪ್ರಥಮ, ದ್ವಿತೀಯ ಸ್ಥಾನ ಪಡೆದವರನ್ನು ಸನ್ಮಾನಿಸಲಾಯಿತು.

ಸಂಘದ ಮಾಜಿ ಅಧ್ಯಕ್ಷರುಗಳಾದ ಗಂಗಾಧರ ಮಿತ್ತಮಾರು, ಪೀತಾಂಬರ ಹೇರಾಜೆ, ಪಿ. ಕೆ. ರಾಜು ಪೂಜಾರಿ, ಜಯರಾಮ ಬಂಗೇರ ಹೇರಾಜೆ, ಭಗೀರಥ ಜಿ., ಚಿದಾನಂದ ಎಲ್ದಕ್ಕ, ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಪ್ರಧಾನ ಕಾರ್ಯದರ್ಶಿ ನಿತೀಶ್ ಹೆಚ್. ಕುಕ್ಕೇಡಿ, ಕೋಶಾಧಿಕಾರಿ ಪ್ರಶಾಂತ್ ಕುಮಾರ್ ಕೊಕ್ರಾಡಿ, ಜತೆ ಕಾರ್ಯದರ್ಶಿ ಸಂತೋಷ ಉಪ್ಪಾರು, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಎಂ ಕೆ. ಪ್ರಸಾದ್, ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕರುಗಳಾದ ವಿಶ್ವನಾಥ ಪೂಜಾರಿ ಗುಂಡೂರಿ, ನಾರಾಯಣ ಉಚ್ಚೂರು, ಚಂದ್ರಶೇಖರ್ ಇಂದಬೆಟ್ಟು, ಸಂತೋಷ್ ಕೆ. ಸಿ. ಸುನಿಲ್ ಕನ್ಯಾಡಿ, ರೂಪೇಶ್ ಕೆ. ಧರ್ಮಸ್ಥಳ, ಜಯ ಕುಮಾರ್, ರವೀಂದ್ರ ಬಿ. ಆಮೀನ್, ಗುರುರಾಜ್ ಗುರಿಪಳ್ಳ, ರಾಜಶ್ರೀ ರಮಣ್, ಉಷಾ ಕಿರಣ್, ನಮಿತಾ ತೋಟತ್ತಾಡಿ, ವಿನೋದಿನಿ ರಾಮಪ್ಪ, ಕರುಣಾಕರ ಬೆಳ್ತಂಗಡಿ, ಕಮಲಾಕ್ಷ ಬೆಳ್ತಂಗಡಿ , ಪ್ರಮೋದ್ ಕುಮಾರ್, ಗುಣಕಾರ, ಹರಿದಾಸ್ ಕೇದೆ, ತರುಷ್ ಜೆ. ಹೇರಾಜೆ,ಮಹಿಳಾ ಬಿಲ್ಲವ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು, ಗ್ರಾಮ ಸಮಿತಿಗಳ ಪದಾಧಿಕಾರಿಗಳು. ಬಿಲ್ಲವ ಸಮಾಜದ ಮುಖಂಡರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ಮೊದಲು ರಘುನಾಥ ಶಾಂತಿ ಮತ್ತು ಬಳಗದವರಿಂದ ಗುರು ಪೂಜೆ, ಶ್ರೀ ಗುರುನಾರಾಯಣ ಭಜನಾ ಮಂಡಳಿಯಿಂದ ಭಜನೆ ನಡೆಯಿತು. ಸಂಘದ ಪ್ರಧಾನ ಕಾರ್ಯದರ್ಶಿ ನಿತೀಶ್ ಹೆಚ್. ಕುಕ್ಕೇಡಿ ಸ್ವಾಗತಿಸಿ ಪ್ರಜ್ಞಾ ಓಡಿನ್ನಾಳ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here