






ಧರ್ಮಸ್ಥಳ: ಸರಕಾರಿ ಪ್ರೌಢಶಾಲೆ, ಕೊಕ್ರಾಡಿಯಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಧರ್ಮಸ್ಥಳದ ಎಸ್. ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಬಹುಮಾನಗಳನ್ನು ಪಡೆದು ಶಾಲೆಗೆ ಹೆಮ್ಮೆ ಮತ್ತು ಗೌರವ ತಂದಿದ್ದಾರೆ.


ಪ್ರೌಢಶಾಲಾ ವಿಭಾಗದಲ್ಲಿ ಅನ್ಶಿಕಾ ಮತ್ತು ಸಿಯಾ ಅವರು ಆರ್ಟಿಸ್ಟಿಕ್ ಪೇರ್ ವಿಭಾಗದಲ್ಲಿ ತೃತೀಯ ಸ್ಥಾನ, ಸಿಯಾ ಅವರು ಆರ್ಟಿಸ್ಟಿಕ್ ಸೋಲೋ ಹಾಗೂ ಟ್ರೆಡಿಷನಲ್ ಯೋಗ ವಿಭಾಗಗಳಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಅಂಜಲಿ ಮತ್ತು ವಂಶಿಕಾ ಅವರು ರಿದಮಿಕ್ ಪೇರ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪೂರ್ವಿಕಾ ಮತ್ತು ಸಾನ್ವಿ ಅವರು ಆರ್ಟಿಸ್ಟಿಕ್ ಪೇರ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಅದಿತಿ ಮತ್ತು ಅರ್ಚನ ಅವರು ರಿದಮಿಕ್ ಪೇರ್ ವಿಭಾಗದಲ್ಲಿ ತೃತೀಯ ಸ್ಥಾನ ಹಾಗೂ ಅದಿತಿ ಅವರು ಆರ್ಟಿಸ್ಟಿಕ್ ಸೋಲೋ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದು, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಕೂಡ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.









