






ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ 2026ನೇ ಸಾಲಿನ ಬೆಳ್ತಂಗಡಿ ಮತ್ತು ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟವನ್ನು ಆ. 28ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ಆತಿಥ್ಯದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.


ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷ ವಿನಯ್ ಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಕೊಯ್ಯೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ್ ಕುಮಾರ್, ಪ್ರೌಢ ಶಿಕ್ಷಕ ಸುಧಾಕರ ಶೆಟ್ಟಿ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಕಸ್ತೂರಿ, ಕ್ರೀಡಾಕೂಟ ಸಂಘಟಕ ರವಿ, ನಡ ಶಾಲೆಯ ದೈಹಿಕ ಶಿಕ್ಷಣ ನಿರ್ದೇಶಕ ಸುಜಯ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರವೀಣ್, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಚಂದ್ರಶೇಖರ ಸಾಲ್ಯಾನ್, ಮುಖ್ಯೋಪಾಧ್ಯಾಯಿನಿ ವೀಣಾ ಎಂ ಉಪಸ್ಥಿತರಿದ್ದರು.
ಪಂದ್ಯಾಟದಲ್ಲಿ ಎರಡೂ ವಲಯದ ವಿವಿಧ ಶಾಲೆಗಳ ತಂಡಗಳು ಭಾಗವಹಿಸಿ ಉತ್ತಮ ಪ್ರತಿಭೆ ಪ್ರದರ್ಶಿಸಿದವು. ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಪ್ರಥಮ – ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು, ದ್ವಿತೀಯ ವಿಭಾಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸರ್ಕಾರಿ ಪ್ರೌಢಶಾಲೆ ಕೊಯ್ಯೂರು, ದ್ವಿತೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ಪಡೆದುಕೊಂಡಿದೆ. ವಿಜೇತ ತಂಡಗಳಿಗೆ ಪ್ರಶಸ್ತಿ, ಪದಕ ಮತ್ತು ಪ್ರಮಾಣಪತ್ರ ವಿತರಿಸಲಾಯಿತು.









