






ಧರ್ಮಸ್ಥಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಧರ್ಮಸ್ಥಳ ವಲಯದ ನಾರ್ಯ ಅಂಗನವಾಡಿ ಕಾರ್ಯಕರ್ತೆ ತಿಮ್ಮಪ್ಪ ಗೌಡರ ಪತ್ನಿ ಜಾನಕಿ ಸುಮಾರು 38 ವರ್ಷಗಳ ಕಾಲ ಸೇವೆ ಸಲ್ಲಿಸಿ ಆ.31ರಂದು ಸೇವಾ ನಿವೃತ್ತಿ ಹೊಂದಿರುತ್ತಾರೆ.


ಧರ್ಮಸ್ಥಳ ಆರೋಗ್ಯ ಕೇಂದ್ರದಲ್ಲಿ ವಲಯದ ಎಲ್ಲಾ ಕಾರ್ಯಕರ್ತರು ಹಾಗೂ ಮೇಲ್ವಿಚಾರಕಿ, ಆರೋಗ್ಯ ಇಲಾಖೆ ಸಿಬ್ಬಂದಿಗಳು ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಈ ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕಿ ನಾಗವೇಣಿ ಅವರ ನಿಷ್ಠಾವಂತ ಕರ್ತವ್ಯದ ಬಗ್ಗೆ ವಿವರಿಸಿ ಶುಭ ಹಾರೈಸಿದರು. ಧರ್ಮಸ್ಥಳ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜು ಶುಭ ಹಾರೈಸಿದರು. ಸಹೋದ್ಯೋಗಿಗಳು ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವಿದ್ಯಾವತಿ ಸ್ವಾಗತಿಸಿ, ಲೀಲಾವತಿ ವಂದಿಸಿದರು.









