






ಬೆಳ್ತಂಗಡಿ: 2026-27ನೇ ಸಾಲಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆ.30 ರವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ.



ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 29.08.2026, ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30.09.2026, ಹೊಸ ಅರ್ಜಿಗಳನ್ನು ತಾಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ಮಾಡಲು ನಿಗದಿಪಡಿಸಿದ ಅಂತಿಮ ದಿನಾಕ 03.10.2026, ತಾಲೂಕು ಸಮಿತಿಯ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸುವ ದಿನಾಂಕ 06.10.2026, ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ನಿಗದಿಪಡಿಸಿದ ಅಂತಿಮ ದಿನಾಂಕ 15.10.2026 ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪತ್ರಿಕೆಯಲ್ಲಿ ತಿಳಿಸಿದ್ದಾರೆ.









