






ಕನ್ಯಾಡಿ : ಬೈಂದೂರಿನ ಗೋಳಿಹೊಳೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ರಾಮ ಕ್ಷೇತ್ರದ ಮಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ನೇತೃತ್ವದಲ್ಲಿ ಕಾರ್ಕಳ ಬಿಲ್ಲವ ಸಂಘದ 300ಕ್ಕೂ ಮಿಕ್ಕಿ ಮಂದಿ ಸೆ. 1ರಂದು ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದರು.



ಅವರೆಲ್ಲರನ್ನು ಬ್ರಹ್ಮಾನಂದ ಶ್ರೀಗಳು ಗೌರವಿಸಿದರು.









