






ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಸಹಕಾರ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡುತ್ತಿರುವ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ 2025-26ನೇ ಸಾಲಿನ ಮಹಾಸಭೆಯಲ್ಲಿ ನೀಡಲಾಗುವ ಪ್ರತಿಷ್ಠಿತ ಶ್ರೀ ಗುರು ಮಾಣಿಕ್ಯ ಪ್ರಶಸ್ತಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಮಿಷನರ್ ಹಾಗೂ ಮಾಜಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಐಎಎಸ್ ಅವರು ಆಯ್ಕೆಯಾಗಿದ್ದಾರೆ.


ಸಾರ್ವಜನಿಕ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ಅವರಿಗೆ ಸೆ.5ರಂದು ಬೆಳ್ತಂಗಡಿಯ ಸಿವಿಸಿ ಹಾಲ್ನಲ್ಲಿ ನಡೆಯಲಿರುವ ಮಹಾಸಭೆಯಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಘದ ಅಧ್ಯಕ್ಷ ಭಗೀರಥ ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ನಾಲ್ವರು ಸಾಧಕರಿಗೆ ಗುರುದೇವ ಗೌರವ ಪುರಸ್ಕಾರಮಹಾಸಭೆಯಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಶ್ರೀ ಗುರುದೇವ ಗೌರವ ಪುರಸ್ಕಾರ ನೀಡಲಾಗುವುದು.
ಯಕ್ಷಗಾನ ಕ್ಷೇತ್ರದ ಖ್ಯಾತ ಹಾಸ್ಯ ಕಲಾವಿದ ಸುಂದರ ಬಂಗಾಡಿ, ಸಮಾಜ ಸೇವೆ ವಿಭಾಗದಲ್ಲಿ ಸ್ನೇಹದೀಪ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಸಂಸ್ಥಾಪಕಿ ತಬಸ್ಸುಮ್, ಶಿಕ್ಷಣ ಕ್ಷೇತ್ರದ ಸಾಧಕಿ, ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಮಾರಿ ದಿಶಾ ಪೂಜಾರಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಅಂತರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಕುಮಾರಿ ಧನಲಕ್ಷ್ಮೀ ಪೂಜಾರಿ ಅವರಿಗೆ ಗೌರವ ಪುರಸ್ಕಾರ ನಡೆಯಲಿದೆ.ಈ ಕುರಿತು ಸಂಘದ ಅಧ್ಯಕ್ಷ ಭಗೀರಥ ಜಿ., ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ., ವಿಶೇಷಾಧಿಕಾರಿ ಯಂ. ಮೋನಪ್ಪ ಪೂಜಾರಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ ಕುಮಾರ್ ಜಂಟಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.









