







ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಕಾಶಿ ಶೆಟ್ಟಿಯವರ ಸ್ಮರಣಾರ್ಥ ಮಕ್ಕಳು ನವಶಕ್ತಿ, ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಬೆಂಗಳೂರು ಬಂಟರ ಸಂಘ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾದಾನ, ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಸಮಾರಂಭ ಸೆ.6ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಬಂಟರ ಯಾನೆ ನಾಡವರ ಸಂಘದ ಗೌರವ ಮಾರ್ಗದರ್ಶಕ ಶಶಿಧರ ಶೆಟ್ಟಿ ಬರೋಡ, ನವಶಕ್ತಿ ಉದ್ಘಾಟಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಅಧ್ಯಕ್ಷ ಪಿ. ಹೆಚ್. ಪ್ರಕಾಶ್ ಶೆಟ್ಟಿ ನೊಚ್ಚವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಕಾರ್ಕಳ ಅಜೆಕಾರಿನ ಜ್ಞಾನಸುಧಾ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ। ಸುಧಾಕರ ಶೆಟ್ಟಿ ಉಪಸ್ಥಿತಿ ವಹಿಸಲಿದ್ದಾರೆ.


ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಇದರ ಉಪಾಧ್ಯಕ್ಷ ಜಯಂತ್ ಶೆಟ್ಟಿ ಕುಂಟಿನಿ, ಬಂಟರ ಯಾನೆ ನಾಡವರ ಸಂಘ ಮಂಗಳೂರು ಇದರ ತಾಲೂಕು ಸಂಚಾಲಕರಾದ ಎಂ ಜಯರಾಮ ಭಂಡಾರಿ ಧರ್ಮಸ್ಥಳ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ನಿರ್ದೆಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸುವುದರ ಜತೆಗೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನುಪ್ರೋತ್ಸಾಹಿಸುವ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಗೌರವಿಸುವ ಮೂಲಕ ಯುವಜನರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸುವಂತೆ ಬಂಟರ ಸಂಘದ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ಉಪಾಧ್ಯಕ್ಷರಾದ ರಾಜು ಶೇಟ್ಟಿ ಬೆಂಗತ್ಯಾರು, ಉಮೇಸ ಶೆಟ್ಟಿ ಉಜಿರೆ, ಕೋಶಾಧಿಕಾರಿ ವಸಂತ್ ಶೆಟ್ಟಿ ಶ್ರದ್ಧಾ, ಜತೆ ಕಾರ್ಯದರ್ಶಿ ರವಿ ಸುಕ್ಕೇರಿ, ವಿದ್ಯಾರ್ಥಿನಿಧಿ ಸಂಚಾಲಕ ಅಜಿತ್ ಜ ಶೆಟ್ಟಿ, ಯುವ ವಿಭಾಗದ ಅಧ್ಯಕ್ಷ ಅಜಯ್ ಜೆ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ವಸುಧಾ ಪಿ ಶೆಟ್ಟಿ ಸೇರಿದಂತೆ ತಾಲೂಕು ಬಂಟರ ಸಂಘದ ವತಿಯಿಂದ ಮನವಿ ಮಾಡಲಾಗಿದೆ.









