ಅನುಗ್ರಹ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಕರಾಟೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

0

ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಆಶ್ರಯದಲ್ಲಿ ಇಂದು ಸುಳ್ಯದಲ್ಲಿ ನಡೆದ 14 ಮತ್ತು 17 ವಯೋಮಿತಿಯ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅನುಗ್ರಹ ಇಂಗ್ಲಿಷ್ ಮೀಡಿಯಂ ಸ್ಕೂಲ್, ಉಜಿರೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಸ್ಪರ್ಧೆಯಲ್ಲಿ ಅನುಗ್ರಹ ಶಾಲೆಯ ವಿದ್ಯಾರ್ಥಿಗಳಾದ ಮಹಮ್ಮದ್ ಶಫೀಕ್, ಸ್ಟೀವನ್ ಲೋಬೊ, ಪ್ರಮೀತ್ ಹಾಗೂ ವಿಶ್ವಾಸ್ ಶೆಟ್ಟಿ ಅವರು ತಮ್ಮ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಅದೇ ರೀತಿ, ವಿದ್ಯಾರ್ಥಿಗಳಾದ ಸೌರವ್ ಹಾಗೂ ಅಮೋಘ್ ಆರ್. ಶೆಟ್ಟಿ ಅವರು ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಸಂಚಾಲಕರು, ಪ್ರಾಂಶುಪಾಲರು, ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ರಾಜ್ಯ ಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here