ಲಾಯಿಲ: 22ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಸಿದ್ಧತೆ ಸೆ.6ರಂದು ವಿಘ್ನೇಶ್ವರ ಕಲಾ ಮಂದಿರದಲ್ಲಿ ವೈಭವದ ಉತ್ಸವಾಚರಣೆ

0

ಬೆಳ್ತಂಗಡಿ: ಗ್ರಾಮೀಣ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು ಬರುತ್ತಿರುವ ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ, ಪ್ರತೀ ವರ್ಷದಂತೆ ಈ ವರ್ಷವೂ 22ನೇ ವರ್ಷದ ಮೊಸರು ಕುಡಿಕೆ ಉತ್ಸವವು ಸೆ.06ರಂದು ವಿಶ್ವೇಶ್ವರ ಕಲಾ ಮಂದಿರದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಶ್ರದ್ದೇಶ್ ಗಾಣಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಬೆಳಿಗ್ಗೆ, ದ್ವಾರಕಾ ಡೈವಿಂಗ್ ಸ್ಕೂಲ್ ಮಾಲಕ, ಉದ್ಯಮಿ ಯಶವಂತ ಬಾಳಿಗ ಮೊಸರು ಕುಡಿಕೆ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ ಬಿ., ಬೆಳ್ತಂಗಡಿ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಶಿಧರ ಎಂ. ಕಲ್ಲಂಜ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ ನಾವೂರು, ಬೆಳ್ತಂಗಡಿ ನವಮಿ ಕನ್‌ಸ್ಟ್ರಕ್ಷನ್ ಮಾಲಕ ನಾಗೇಶ್ ಎಂ., ಲಾಯಿಲ ಗ್ರಾಮ ಪಂಚಾಯತ್ ಲೆಕ್ಕ ಸಹಾಯಕಿ ಸುಪ್ರೀತಾ ಶೆಟ್ಟಿ, ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಗಣೇಶ್ఆರ್. ಉಪಸ್ಥಿತರಿರಲಿದ್ದಾರೆ.

ಸಾಯಂಕಾಲ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು, ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಅಧ್ಯಕ್ಷ ಶ್ರದ್ಧೇಶ್ ಗಾಣಿಗ ವಹಿಸಿಕೊಳ್ಳಲಿದ್ದಾರೆ.ಮುಖ್ಯ ಅತಿಥಿಗಳಾಗಿ ಸೌತಡ್ಕ ನೈಮಿಷ ವೆಂಚರ್ಸ್‌ ಬಾಲಕೃಷ್ಣ, ಪುತ್ತೂರಿನ ಯುವ ಉದ್ಯಮಿ ಲಕ್ಷ್ಮೀಪ್ರಸಾದ್‌ ಬೆಟ್ಟ, ಬೆಳ್ತಂಗಡಿ ಎಸಿಸಿಇ(ಐ) ಸೆಂಟರ್ ಅಧ್ಯಕ್ಷ ಸುರೇಶ್ ಬಂಗೇರ ಎಂ. ಡಿ., ಬೆಳ್ತಂಗಡಿ ಲಯನ್ಸ್ ಕ್ಲಬ್‌ ಅಧ್ಯಕ್ಷ ರಾಘುರಾಮ ಶೆಟ್ಟಿ ಸಾಧನ, ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ., ಉಜಿರೆ ಎಸ್‌ಡಿಎಂ ಆಸ್ಪತ್ರೆಯ ಹಿರಿಯ

ವೈದ್ಯ ಡಾ. ಕಾರ್ತಿಕ್ ಆರ್. ರಾವ್, ಬೆಳ್ತಂಗಡಿ ಎಸ್.ಎಂ.ಎಸ್. ಮಾಲಕ ಚಿದಾನಂದ ಪಿ., ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಸುರೇಶ್ ವಿ. ಕೈಪ್ಲೋಡಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮಗಳ ವಿವರ: ಸಾರ್ವಜನಿಕರಿಗೆ, ಮಹಿಳೆಯರಿಗೆ ಹಾಗೂ ಶಾಲಾ ಮಕ್ಕಳಿಗೆ, ಮಲ್ಲಕಂಬ, ಹಗ್ಗಜಗ್ಗಾಟ, ಮಡಿಕೆ ಒಡೆಯುವುದು, ವಾಲಿಬಾಲ್, ಕಬಡ್ಡಿ, ತ್ರೋಬಾಲ್ ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಸಾರ್ವಜನಿಕ ಹಾಗೂ ಮಕ್ಕಳ ಆಟೋಟ ಸ್ಪರ್ಧೆಗಳು ಬೆಳಗ್ಗೆ 10 ಗಂಟೆಗೆ ಸರಿಯಾಗಿ ಪ್ರಾರಂಭಗೊಳ್ಳಲಿದೆ. ಮಕ್ಕಳಿಗೆ ಮುದ್ದು ಕೃಷ್ಣ ಹಾಗೂ ಬಾಲಕೃಷ್ಣ ವೇಷ ಸ್ಪರ್ಧೆಯೂ ನಡೆಯಲಿದೆ. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಲಿದೆ.

LEAVE A REPLY

Please enter your comment!
Please enter your name here