ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

0

ಬೆಳ್ತಂಗಡಿ ಬಂಗಾಡಿ ವಲಯ ಮಟ್ಟದ ಬಾಲಕ-ಬಾಲಕಿಯರ U-14 ವಯೋಮಾನದ ವಾಲಿಬಾಲ್ ಪಂದ್ಯಾಟವು ಸೆ.03 ಗುರುವಾರದಂದು ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳು ಹಾಗೂ ನೋಟರಿ ವಕೀಲರಾದ ಶ್ರೀ ಗಣೇಶ್ ಗೌಡ ಇವರು ವಹಿಸಿ, ವಿದ್ಯಾರ್ಥಿಗಳ ದೈಹಿಕ ಬೆಳವಣಿಗೆಗೆ ಇಂತಹ ಪಂದ್ಯಾಟಗಳು ಅವಶ್ಯಕವಾದುದು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ವಿಕ್ರಮ್ ಜೆ. ಎನ್. ನಿವೃತ್ತರು ಭಾರತೀಯ ಭೂಸೇನೆ, ಚೇತನಾಕ್ಷಿ, ಶಿಕ್ಷಣ ಸಂಯೋಜಕರು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬೆಳ್ತಂಗಡಿ, ಅಮಿತಾನಂದ ಹೆಗಡೆ ಉಪಾಧ್ಯಕ್ಷರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಬೆಳ್ತಂಗಡಿ ವಲಯ, ರವಿ ಕಿಲ್ಲೂರು, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಬೆಳ್ತಂಗಡಿ – ಬಂಗಾಡಿ ವಲಯದ ಕ್ರೀಡಾ ಸಂಯೋಜಕರು, ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ – ರಕ್ಷಕರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ, ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ.. ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ಎ ಇವರುಗಳು ಉಪಸ್ಥಿತರಿದ್ದರು.

ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಸ್ವಾಗತಿಸಿದರು. ದೈಹಿಕ ಶಿಕ್ಷಕ ಹರೀಶ್ ವಂದನಾರ್ಪಣೆಯನ್ನು ಗೈದರು. ಶಿಕ್ಷಕಿ ವಂದನಾ ಕಾರ್ಯಕ್ರಮವನ್ನು ನಿರೂಪಿಸಿದರು. ಎಲ್ಲಾ ಶಿಕ್ಷಕ ಶಿಕ್ಷಕೇತರರು ಭಾಗವಹಿಸಿದರು.

LEAVE A REPLY

Please enter your comment!
Please enter your name here