ಕರ್ನೋಡಿ ಲಾಯಿಲ ಶಾಲೆಯಲ್ಲಿ ‘ಗುರು ವಂದನಾ’ ಕಾರ್ಯಕ್ರಮ: 29 ವರ್ಷ ಸೇವೆ ಸಲ್ಲಿಸಿದ ಶಿಕ್ಷಕಿ ಲಲಿತಾ ಸನ್ಮಾನ

0

ಲಾಯಿಲ: ಹಳೆ ವಿದ್ಯಾರ್ಥಿ ಸಂಘ, ಸ.ಉ.ಹಿ.ಪ್ರಾ. ಶಾಲೆ ಕರ್ನೋಡಿ ಲಾಯಿಲ ಇದರ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರು ವಂದನಾ” ಕಾರ್ಯಕ್ರಮವು ಸೆ. 4 ರಂದು ಶಾಲಾ ಸಭಾಂಗಣದಲ್ಲಿ ಜರುಗಿತು. ​

ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಶಾಲೆಯಲ್ಲಿ ಸುದೀರ್ಘ 29 ವರ್ಷಗಳ ಕಾಲ ಅವಿರತ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಭವ್ಯ ಬೆಳವಣಿಗೆಗೆ ಕಾರಣರಾದ ಹಿರಿಯ ಶಿಕ್ಷಕಿ ಲಲಿತಾ ಅವರನ್ನು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.​

ಕಾರ್ಯಕ್ರಮದ ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಬಿ.ಕೆ. ಧನಂಜಯ ರಾವ್, ಸ್ಥಾಪಕಾಧ್ಯಕ್ಷ ಸಂತೋಷ್ ಬಿ.ಎಲ್., ರೋಟರಿ ಕ್ಲಬ್ ಮಹಿಳಾ ವಿಭಾಗದ ಅಧ್ಯಕ್ಷೆ ರಾಜಶ್ರೀ ರಾವ್, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಣೇಶ್ ಆರ್., ಕೋಶಾಧಿಕಾರಿ ಸದಾಶಿವ ಸಮಗಾರ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಅಧ್ಯಕ್ಷೆ ಸೌಮ್ಯ ಹಾಗೂ ಶಾಲಾ ಮುಖ್ಯೋಪಾಧ್ಯಾಯ ಜಗನ್ನಾಥ್ ಎಂ. ಉಪಸ್ಥಿತರಿದ್ದರು. ​

ವೇದಿಕೆ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಕ್ರೀಡಾ ಕಾರ್ಯದರ್ಶಿ ದಿವ್ಯ ಬಿ. ಸ್ವಾಗತಿಸಿದರು. ಸಂಘದ ಉಪಾಧ್ಯಕ್ಷೆ ಸ್ವಾತಿ ಅಭಿನಂದನ ಪತ್ರವನ್ನು ವಾಚಿಸಿದರು. ಸಹ ಶಿಕ್ಷಕರಾದ ಕೃಷ್ಣ ಕುಮಾರ್ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರೆ, ಕಾರ್ಯದರ್ಶಿ ಗಣೇಶ್ ಆರ್. ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here