ಬೆಳ್ತಂಗಡಿ: ಡ್ರಗ್ಸ್ ವಿರುದ್ಧ ಪೊಲೀಸರ ಭರ್ಜರಿ ಬೇಟೆ!ಗುರುವಾಯನಕೆರೆಯಲ್ಲಿ ಗಾಂಜಾ, ಎಂಡಿಎಂಎ ಸಮೇತ ಇಬ್ಬರು ಅರೆಸ್ಟ್

0

ಬೆಳ್ತಂಗಡಿ: ಮಾದಕವಸ್ತು ಮಾರಾಟ ಮತ್ತು ಸೇವನೆ ವಿರುದ್ಧ ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ಮತ್ತಷ್ಟು ಚುರುಕುಗೊಳಿಸಿದ್ದು, ಗುರುವಾಯನಕೆರೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಗಾಂಜಾ ಹಾಗೂ ಎಂಡಿಎಂಎ ಸಮೇತ ಇಬ್ಬರನ್ನು ಬಂಧಿಸಿದ್ದಾರೆ.

ಸೆ.5ರಂದು ಸಂಜೆ ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಸರ್ಕಾರಿ ಪ್ರೌಢಶಾಲಾ ಮೈದಾನದ ಬಳಿಯ ಗುಡ್ಡ-ಕಾಡು ಪ್ರದೇಶದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ದ್ವಿಚಕ್ರ ವಾಹನಗಳ ಬಳಿ ನಾಲ್ವರು ಮಾತನಾಡುತ್ತಾ ನಿಂತಿದ್ದು, ಪೊಲೀಸರನ್ನು ಕಂಡು ಓಡಲು ಯತ್ನಿಸಿದ್ದಾರೆ. ಅವರಲ್ಲಿ ಇಬ್ಬರನ್ನು ಪೊಲೀಸರು ಬೆನ್ನಟ್ಟಿ ಹಿಡಿದಿದ್ದಾರೆ.

ಬಂಧಿತರನ್ನು ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ತ್ವಲ್ ಹ ಅಲಿಯಾಸ್ ಅಜ್ಜರ್ ಅಲಿಯಾಸ್ ಅನ್ಸರ್ (21) ಹಾಗೂ ಪಿಲಿಚಂಡಿಕಲ್ಲು ನಿವಾಸಿ ಇಬ್ರಾಹಿಂ (29) ಎಂದು ಗುರುತಿಸಲಾಗಿದೆ.

ಅನ್ಸರ್ ಬಳಿಯಿಂದ ಸುಮಾರು ₹5 ಸಾವಿರ ಮೌಲ್ಯದ 1 ಗ್ರಾಂ ಎಂಡಿಎಂಎ ಹಾಗೂ ಇಬ್ರಾಹಿಂ ಬಳಿಯಿಂದ ಸುಮಾರು ₹3 ಸಾವಿರ ಮೌಲ್ಯದ 29 ಗ್ರಾಂ ಗಾಂಜಾ ಪತ್ತೆಯಾಗಿದೆ. ಕಾರ್ಯಾಚರಣೆಯಲ್ಲಿ ಎರಡು ದ್ವಿಚಕ್ರ ವಾಹನಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂಝತ್ ಕರಾರ್ (31) ಹಾಗೂ ನೌಷದ್ ಎಂಬ ಇನ್ನಿಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಅವರು ಸ್ಥಳದಿಂದ ಪರಾರಿಯಾಗಿದ್ದಾರೆ.

ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬಂಧಿತ ಇಬ್ಬರನ್ನು ಸೆ.6ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಹಾಗೂ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ಮಾರ್ಗದರ್ಶನದಲ್ಲಿ, ಸಬ್ ಇನ್ಸ್‌ಪೆಕ್ಟರ್ ಆನಂದ್ ಎಂ. ಮತ್ತು ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು.

ಗಾಂಜಾ, ಎಂಡಿಎಂಎ ಸಮೇತ ಇಬ್ಬರು ಅರೆಸ್ಟ್ಬೆಳ್ತಂಗಡಿ: ಮಾದಕವಸ್ತು ಮಾರಾಟ ಮತ್ತು ಸೇವನೆ ವಿರುದ್ಧ ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ಮತ್ತಷ್ಟು ಚುರುಕುಗೊಳಿಸಿದ್ದು, ಗುರುವಾಯನಕೆರೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಗಾಂಜಾ ಹಾಗೂ ಎಂಡಿಎಂಎ ಸಮೇತ ಇಬ್ಬರನ್ನು ಬಂಧಿಸಿದ್ದಾರೆ.ಸೆ.5ರಂದು ಸಂಜೆ ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಸರ್ಕಾರಿ ಪ್ರೌಢಶಾಲಾ ಮೈದಾನದ ಬಳಿಯ ಗುಡ್ಡ-ಕಾಡು ಪ್ರದೇಶದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ದ್ವಿಚಕ್ರ ವಾಹನಗಳ ಬಳಿ ನಾಲ್ವರು ಮಾತನಾಡುತ್ತಾ ನಿಂತಿದ್ದು, ಪೊಲೀಸರನ್ನು ಕಂಡು ಓಡಲು ಯತ್ನಿಸಿದ್ದಾರೆ. ಅವರಲ್ಲಿ ಇಬ್ಬರನ್ನು ಪೊಲೀಸರು ಬೆನ್ನಟ್ಟಿ ಹಿಡಿದಿದ್ದಾರೆ.ಬಂಧಿತರನ್ನು ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ತ್ವಲ್ ಹ ಅಲಿಯಾಸ್ ಅಜ್ಜರ್ ಅಲಿಯಾಸ್ ಅನ್ಸರ್ (21) ಹಾಗೂ ಪಿಲಿಚಂಡಿಕಲ್ಲು ನಿವಾಸಿ ಇಬ್ರಾಹಿಂ (29) ಎಂದು ಗುರುತಿಸಲಾಗಿದೆ.ಅನ್ಸರ್ ಬಳಿಯಿಂದ ಸುಮಾರು ₹5 ಸಾವಿರ ಮೌಲ್ಯದ 1 ಗ್ರಾಂ ಎಂಡಿಎಂಎ ಹಾಗೂ ಇಬ್ರಾಹಿಂ ಬಳಿಯಿಂದ ಸುಮಾರು ₹3 ಸಾವಿರ ಮೌಲ್ಯದ 29 ಗ್ರಾಂ ಗಾಂಜಾ ಪತ್ತೆಯಾಗಿದೆ. ಕಾರ್ಯಾಚರಣೆಯಲ್ಲಿ ಎರಡು ದ್ವಿಚಕ್ರ ವಾಹನಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂಝತ್ ಕರಾರ್ (31) ಹಾಗೂ ನೌಷದ್ ಎಂಬ ಇನ್ನಿಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಅವರು ಸ್ಥಳದಿಂದ ಪರಾರಿಯಾಗಿದ್ದಾರೆ.ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಬಂಧಿತ ಇಬ್ಬರನ್ನು ಸೆ.6ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಹಾಗೂ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ಮಾರ್ಗದರ್ಶನದಲ್ಲಿ, ಸಬ್ ಇನ್ಸ್‌ಪೆಕ್ಟರ್ ಆನಂದ್ ಎಂ. ಮತ್ತು ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು.

LEAVE A REPLY

Please enter your comment!
Please enter your name here