







ಬೆಳ್ತಂಗಡಿ: ಮಕ್ಕಳಿಲ್ಲದ ಕೊರಗು ಮತ್ತು ಪತ್ನಿಯ ಅನಾರೋಗ್ಯದ ಚಿಂತೆಯಿಂದ ಖಿನ್ನತೆಗೊಳಗಾಗಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯ್ಯೂರು ಗ್ರಾಮದ ಪಿಜಕ್ಕಳದಲ್ಲಿ ಸೆ.6 ರಂದು ನಡೆದಿದೆ.
ಬೆಳ್ತಂಗಡಿ ತಾಲೂಕು ಕೊಯ್ಯೂರು ಗ್ರಾಮದ ಪಿಜಕ್ಕಳದ ದಿ. ಬಾಬು ಗೌಡ ಅವರ ಪುತ್ರ ಸುಧಾಕರ ಗೌಡ (56) ಮೃತರು.ಪತ್ನಿ ನಾಲ್ಕು ತಿಂಗಳ ಹಿಂದೆ ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ತವರು ಮನೆ ಮತ್ತು ತಂಗಿ ಮನೆಯಲ್ಲಿದ್ದರು.


ಮೊದಲೇ ಮಕ್ಕಳಿಲ್ಲದ ಚಿಂತೆಯಲ್ಲಿದ್ದ ಸುಧಾಕರ ಗೌಡ, ನಾಲ್ಕು ತಿಂಗಳಿಂದ ಮನೆಯಲ್ಲಿ ಪತ್ನಿ ಇಲ್ಲದೆ ಒಬ್ಬಂಟಿಯಾಗಿ ವಾಸಿಸುತ್ತಿದ್ದು, ಕೊರಗಿನಿಂದ ನೊಂದಿದ್ದರು ಎನ್ನಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.









