







ಬೆಳಾಲು : ಬೆಳಾಲು ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಸೆ. 9ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಆಡಳಿತಾಧಿಕಾರಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿಕಾರಿ ಗಣೇಶ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.


ಕಳೆದ ಗ್ರಾಮ ಸಭೆಯಲ್ಲಿ ಅಕ್ರಮ ಸಕ್ರಮ ಮತ್ತು 94ಸಿ ಜಾಗ ಮಂಜುರಾತಿಗೆ ಸಮಸ್ಯೆ ಇರುವುದರಿಂದ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೆ ಮಾಡುವ ಬಗ್ಗೆ ಚರ್ಚೆ ನಡೆದು ಜಂಟಿ ಸರ್ವೆ ಮಾಡುವಂತೆ ನಿರ್ಣಯ ಮಾಡಲಾಗಿತ್ತು ಇನ್ನೂ ಆಗಲಿಲ್ಲ ಕೂಡಲೇ ಜಂಟಿ ಸರ್ವೆ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.ಜಲಜೀವನ್ ಯೋಜನೆಯಲ್ಲಿ ಕುಡಿಯುವ ನೀರು ಸಂಪರ್ಕ ಇನ್ನೂ ಆಗಲಿಲ್ಲ ಈ ಬಗ್ಗೆ ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಸರಿಪಡಿಸ ಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದರು.
ಪಂಚಾಯತ್ ಅಭಿವೃದ್ಧಿ. ಅಧಿಕಾರಿ ಜಗದೀಶ್ ಎಸ್. ಸ್ವಾಗತಿಸಿ ವರದಿ ವಾಚಿಸಿದರು. ಸಿಬ್ಬಂದಿ ಪೂರ್ಣಿಮಾ ಲೆಕ್ಕ ಪತ್ರ ವಾಚಿಸಿದರು.ಸಭೆಯಲ್ಲಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ, ಮಾಜಿ ಅಧ್ಯಕ್ಷ ದಿನೇಶ್ ಕೋಟ್ಯಾನ್, ಮಾಜಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದು ಗ್ರಾಮದ ವಿವಿಧ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಿತು. ಸಿಬ್ಬಂದಿ ವರ್ಗದವರು ಸಹಕರಿಸಿದರು. ಇಲಾಖೆಯ ಅಧಿಕಾರಿಗಳು ವಿವಿಧ ಇಲಾಖಾ ಮಾಹಿತಿ ನೀಡಿದರು.









