ಮೈರೋಳ್ತಡ್ಕ ಶಾಲೆಯಲ್ಲಿ ಧರ್ಮಸ್ಥಳ ಒಕ್ಕೂಟದಿಂದ ಶ್ರಮದಾನ: ಸ್ವಚ್ಛತಾ ಕಾರ್ಯಕ್ರಮ ಯಶಸ್ವಿ​

0

ಮೈರೋಳ್ತಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ, ಮೈರೋಳ್ತಡ್ಕದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 9ರಂದು ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.​

ಶಾಲಾ ಆವರಣ, ಅಡಿಕೆ ತೋಟ ಹಾಗೂ ಮೈದಾನದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ತೆರವುಗೊಳಿಸುವ ಮೂಲಕ ಶಾಲೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಲಾಯಿತು. ಈ ಸಮಾಜಮುಖಿ ಕಾರ್ಯದಲ್ಲಿ ಒಕ್ಕೂಟದ ಅಧ್ಯಕ್ಷರಾದ ಸುಂದರ ಪೂಜಾರಿ, ಗೌರವಾಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ, ಸೇವಾ ಪ್ರತಿನಿಧಿ ಚಂದ್ರಕಲಾ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಹಾಗೂ ಶಾಲಾ ಪೋಷಕರು ಸಕ್ರಿಯವಾಗಿ ಪಾಲ್ಗೊಂಡಿದ್ದರು.

ಮುಖ್ಯೋಪಾಧ್ಯಾಯ ಶೀನಪ್ಪ ಧನ್ಯವಾದ ಅರ್ಪಿಸಿದರು.

LEAVE A REPLY

Please enter your comment!
Please enter your name here