






.ಉಜಿರೆ ಗ್ರಾಮ ಪಂಚಾಯತ್ ಕಚೇರಿಗೆ ಲೋಕಾಯುಕ್ತ ವಿಭಾಗದ ಇನ್ಸ್ಪೆಕ್ಟರ್ ಶ್ರೀ ಮಂಜುನಾಥ್ ಶಂಕರಹಳ್ಳಿ ಅವರ ನೇತೃತ್ವದ ಅಧಿಕಾರಿಗಳ ತಂಡ ಸೆ. 9 ಭೇಟಿ ನೀಡಿ, ವಿವಿಧ ದಾಖಲೆಗಳನ್ನು ಪರಿಶೀಲಿಸಿತು.


ಅಧಿಕಾರಿಗಳು ಕೇಳಿದ ದಾಖಲೆಗಳನ್ನು ಸಿಬ್ಬಂದಿಗಳು ಸಮರ್ಪಕವಾಗಿ ಹಾಜರುಪಡಿಸಿದ್ದು, ಇದಕ್ಕೆ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಅಲ್ಲದೆ, ದಾಖಲೆಗಳ ನಿರ್ವಹಣೆಯನ್ನು ಇನ್ನಷ್ಟು ವ್ಯವಸ್ಥಿತವಾಗಿ ಹಾಗೂ ಉತ್ತಮ ರೀತಿಯಲ್ಲಿ ಕೈಗೊಳ್ಳುವಂತೆ ಸಿಬ್ಬಂದಿಗೆ ಸಲಹೆ ನೀಡಿದರು.ಬಳಿಕ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಭೇಟಿ ನೀಡಿದ ತಂಡವು, ಅಲ್ಲಿನ ಉತ್ತಮ ನಿರ್ವಹಣೆ, ಸ್ವಚ್ಛತೆ ಮತ್ತು ವ್ಯವಸ್ಥಿತ ಕಾರ್ಯನಿರ್ವಹಣೆಯನ್ನು ಕೊಂಡಾಡಿ ಮೆಚ್ಚುಗೆ ವ್ಯಕ್ತಪಡಿಸಿತು.









