







ಬೆಳ್ತಂಗಡಿ: ತಾಲೂಕಿನ ನಡ ಗ್ರಾಮದ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ನಡ ಗ್ರಾಮದ ವಿವಿಧ ಶಾಲಾ-ಅಂಗನವಾಡಿ ಮಕ್ಕಳಿಗಾಗಿ ಸಮವಸ್ತ್ರ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮವು ಸೆ. 09ರಂದು ಯಶಸ್ವಿಯಾಗಿ ನಡೆಯಿತು.


ಕಾರ್ಯಕ್ರಮದಲ್ಲಿ ನಡ ಗ್ರಾಮದ ಒಟ್ಟು 8 ಅಂಗನವಾಡಿ ಕೇಂದ್ರಗಳ 138 ಮಕ್ಕಳು ಹಾಗೂ ಸ್ಥಳೀಯ ಶಾಲೆಯ 67 ಮಕ್ಕಳು ಸೇರಿದಂತೆ ಒಟ್ಟು 205 ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು. ಇದರೊಂದಿಗೆ ನಡ ಸರಕಾರಿ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ಕಲಾ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಸಾಧಕ 4 ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಿ ಗೌರವಿಸಲಾಯಿತು.
ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯ ಗುತ್ತು ಅವರು ಮಕ್ಕಳಿಗಾಗಿ ಸಮವಸ್ತ್ರ ಹಾಗೂ ಪ್ರೋತ್ಸಾಹಧನವನ್ನು ವಿತರಿಸಿ ಶುಭ ಹಾರೈಸಿದರು.ಈ ಧಾರ್ಮಿಕ ಹಾಗೂ ಶೈಕ್ಷಣಿಕ ನೆರವಿನ ಕಾರ್ಯಕ್ರಮದಲ್ಲಿ ದೇವಸ್ಥಾನದ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ. ರಾಜಶೇಖರ ಅಜ್ರಿ, ಪ್ರಮುಖರಾದ ಬಿ. ಮುನಿರಾಜ ಅಜ್ರಿ, ಶಾಲಾ ಮುಖ್ಯೋಪಧ್ಯಾಯರು, ಶಿಕ್ಷಕ ವೃಂದ, ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು









