ವಲಯ ಮಟ್ಟದ ಕಬಡ್ಡಿಯಲ್ಲಿ ಅನಾರು ಶಾಲಾ ಬಾಲಕಿಯರಿಗೆ ಪ್ರಥಮ ಸ್ಥಾನ

0

ಅನಾರು: ನೇಲ್ಯಡ್ಕದಲ್ಲಿ ನಡೆದ 14 ವರ್ಷದೊಳಗಿನ ಬಾಲಕಿಯರ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಅನಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದೆ.

ತಂಡದ ನಾಯಕಿ ಚಿರಾಕ್ಷಿ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಉತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ತಂಡದ ಎಲ್ಲಾ ವಿದ್ಯಾರ್ಥಿನಿಯರಿಗೆ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಧನಂಜಯ ಅಭಿನಂದನೆ ಸಲ್ಲಿಸಿದ್ದಾರೆ.

ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದ ತರಬೇತುದಾರರು, ಸಹಕರಿಸಿದ ಶಿಕ್ಷಕರು ಹಾಗೂ ಪೋಷಕರಿಗೆ ಅವರು ಕೃತಜ್ಞತೆ ಹಾಗೂ ಅಭಿನಂದನೆಗಳನ್ನು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here