ಖೋ ಪಂದ್ಯಾಟ:ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಬಾಲಕರು ತಾಲೂಕು ಮಟ್ಟಕ್ಕೆ ಆಯ್ಕೆ

0

ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರ್ಕಾರಿ ಪ್ರೌಢಶಾಲೆ, ಕೊಕ್ಕಡ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಉಜಿರೆ ವಲಯ ಮಟ್ಟದ 17ರ ವಯೋಮಾನದ ಬಾಲಕರ ಖೋ-ಖೋ ಪಂದ್ಯಾಟದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ಅತ್ಯುತ್ತಮ ಚೇಝರ್ ಪ್ರಶಸ್ತಿಯನ್ನು ಮೋಹಿತ್ ಇವರು ಪಡೆದುಕೊಂಡಿರುತ್ತಾರೆತಂಡಕ್ಕೆ ದೈಹಿಕ ಶಿಕ್ಷಣ ಶಿಕ್ಷಕರಾದ ಭರತ್ ಹಾಗೂ ನಿಶ್ಚಿತ್ ಅವರು ತರಬೇತಿ ಮತ್ತು ಮಾರ್ಗದರ್ಶನ ನೀಡಿದ್ದರು.ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರು, ಪ್ರಾಂಶುಪಾಲರು, ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿ, ತಾಲೂಕು ಮಟ್ಟದ ಪಂದ್ಯಾಟದಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here