






ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ) ಟ್ರಸ್ಟ್ (ರಿ.) ಬೆಳ್ತಂಗಡಿ ತಾಲೂಕು ವತಿಯಿಂದ ಬೆಳ್ತಂಗಡಿ ವಲಯದ ಕಳಿಯ ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗೇರುಕಟ್ಟೆಯಲ್ಲಿ ಶಿಕ್ಷಣದ ಕುರಿತು ವಿಶೇಷ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮವು ಜರುಗಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಉಷಾ ವಿ ನಾಯಕ್ ಅವರು ಮಾತನಾಡಿ, ಮಕ್ಕಳ ಶಿಕ್ಷಣದಲ್ಲಿ ಪೋಷಕರು ಹಾಗೂ ಶಿಕ್ಷಕರ ಜವಾಬ್ದಾರಿಗಳ ಕುರಿತು ತಿಳಿಸಿಕೊಟ್ಟರು. ಅಲ್ಲದೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ನಂತರ ಲಭ್ಯವಿರುವ ಉನ್ನತ ಶಿಕ್ಷಣದ ಅವಕಾಶಗಳ ಬಗ್ಗೆ ವಿಸ್ತೃತವಾದ ಮಾರ್ಗದರ್ಶನ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಾಲೆಯ ಅಭಿವೃದ್ಧಿಗೆ ನಿರಂತರವಾಗಿ ನೆರವು ನೀಡಲಾಗುತ್ತಿದ್ದು, ಇಂದಿನ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಪೋಷಕರಿಗೆ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ಸಹಕಾರಿಯಾಗುವ ಅತ್ಯುತ್ತಮ ಮಾಹಿತಿ ದೊರೆತಿದೆ ಎಂದರು.
ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್ ಅವರು ಶ್ರೀ ಕ್ಷೇತ್ರದ ವತಿಯಿಂದ ನೀಡಲಾಗುವ ‘ಸುಜ್ಞಾನನಿಧಿ’ ಶಿಕ್ಷಣದ ನೆರವಿನ ಸೌಲಭ್ಯದ ಕುರಿತು ಮಾಹಿತಿ ಒದಗಿಸಿದರು.ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯೆ ಅನುರಾಧ ಸ್ವಾಗತಿಸಿ ವಂದಿಸಿದರು









