






ಗುರಿಪಳ್ಳ: ಜಯನಗರ ಗುರಿಪಳ್ಳದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವದ 50ನೇ ವರ್ಷದ ಸುವರ್ಣ ಮಹೋತ್ಸವವು ಸೆ. 14ರಿಂದ 16ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಸಂತೋಷ್ ಗೌಡ ಗೋಳಿದೊಟ್ಟು, ಅಧ್ಯಕ್ಷ ಸದಾನಂದ ಪೂಜಾರಿ ಕೊಡೆಕ್ಕಲ್, ಕಾರ್ಯದರ್ಶಿ ಭರತ್ ಪೂಜಾರಿ, ಬಾಲಕೃಷ್ಣ ಗೌಡ ಬಲಂದ್ರಬೆಟ್ಟು, ರಮಾನಂದ ಶರ್ಮ ಭಾರದ್ವಾಜ, ಶಿವಪ್ರಸಾದ್ ಗೌಡ ಕೇರಿಮಾರು ಹಾಗೂ ನವೀನ್ ಶೆಟ್ಟಿ ಗುತ್ತಿಲಾರಬೆಟ್ಟು ತಿಳಿಸಿದ್ದಾರೆ.
ಗುರಿಪಳ್ಳದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಸುವರ್ಣ ಮಹೋತ್ಸವ ಸಮಿತಿ, ಜಯನಗರ ಶಾಲಾಭಿವೃದ್ಧಿ ಸಮಿತಿ, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು, ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಗುರಿಪಳ್ಳ ಒಕ್ಕೂಟ, ಗೆಳೆಯರ ಬಳಗ, ಲೋಕನಾಡು ಫ್ರೆಂಡ್ಸ್, ಕನ್ಯಾಡಿ ನಿಡಿಗಲ್ ರಿಕ್ಷಾ ಚಾಲಕರು ಮತ್ತು ಮಾಲಕರು, ವಿಮುಕ್ತಿ, ಸ್ತ್ರೀಶಕ್ತಿ ಹಾಗೂ ನವೋದಯ ಸ್ವಸಹಾಯ ಗುಂಪುಗಳು, ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಹಾಗೂ ಏಣೀರುಪಲ್ಲೆಯ ಅಂಗನವಾಡಿ ಕೇಂದ್ರಗಳು ಮತ್ತು ಊರವರ ಸಹಕಾರದೊಂದಿಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.


ಸೆ. 14ರಂದು ಬೆಳಗ್ಗೆ 8ಕ್ಕೆ ಗಣಪತಿ ಹೋಮ ಹಾಗೂ ಗಣಪತಿ ಪ್ರತಿಷ್ಠೆ ನಡೆಯಲಿದೆ. ಬೆಳಗ್ಗೆ 10ಕ್ಕೆ ರಂಗಪೂಜೆ ಆರಂಭವಾಗಲಿದ್ದು, ಮಧ್ಯಾಹ್ನ 1ಕ್ಕೆ ಪಲ್ಲಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಪೂರ್ವಾಹ್ನ 11ಕ್ಕೆ ಶ್ರೀ ಸಿದ್ದಿವಿನಾಯಕ ರಂಗಮಂದಿರ ಹಾಗೂ ಸಭಾಂಗಣದ ಲೋಕಾರ್ಪಣೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಕರಿಂಜೆ ಜಗದ್ಗುರು ಪೀಠದ ಮುಕ್ತಾನಂದ ಶ್ರೀಗಳು ದೀಪ ಬೆಳಗಿಸಿ ಆಶೀರ್ವಚನ ನೀಡಲಿದ್ದಾರೆ.ಸಭಾಂಗಣವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದು, ನಾಮಫಲಕವನ್ನು ವಿಧಾನ ಪರಿಷತ್ ಸದಸ್ಯ ಪಿ.ವಿ. ಮೋಹನ್ ಅನಾವರಣಗೊಳಿಸಲಿದ್ದಾರೆ.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಸಂತೋಷ್ ಗೌಡ ಗೋಳಿದೊಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ.ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅರಿಕೋಡಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಉದ್ಯಮಿ ಶಶಿಧರ ಶೆಟ್ಟಿ ಬರೋಡ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ, ಎಕ್ಸೆಲ್ ಕಾಲೇಜು ಅಧ್ಯಕ್ಷ5ನೇ ವರ್ಷದಸುಮಂತ್ ಕುಮಾರ್ ಜೈನ್ ಮೊದಲಾದವರು ಭಾಗವಹಿಸಲಿದ್ದಾರೆ. ಸಂಜೆ 5.30ರಿಂದ ಗುರಿಪಳ್ಳದ ಅಂಗನವಾಡಿ ಕೇಂದ್ರ, ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ವಿದ್ಯಾರ್ಥಿಗಳು ಹಾಗೂ ಊರವರಿಂದ ವಿವಿಧ ನೃತ್ಯ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ. ರಾತ್ರಿ 9.45ಕ್ಕೆ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಸೆ. 15ರಂದು ಬೆಳಗ್ಗೆ 8ರಿಂದ ಗಣಹೋಮ ಹಾಗೂ ಬೆಳಗ್ಗೆ 8.15ರಿಂದ 108 ತೆಂಗಿನಕಾಯಿ ಗಣಯಾಗ ನಡೆಯಲಿದೆ. ಬೆಳಗ್ಗೆ 9.30ರಿಂದ ರಂಗಪೂಜೆ ಆರಂಭವಾಗಲಿದ್ದು, ಮಧ್ಯಾಹ್ನ 12.45ಕ್ಕೆ ಪಲ್ಲಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಸಂಜೆ 5ರಿಂದ ಪಡಂಗಡಿಯ ಆಶೋತೋಷ್ ಅವರಿಂದ ಕೊಳಲು ವಾದನ ಕಾರ್ಯಕ್ರಮವಿರಲಿದೆ.ಸಂಜೆ 6ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಹರೀಶ್ ಪೂಂಜ ದೀಪ ಬೆಳಗಿಸಲಿದ್ದಾರೆ. ಡಾ. ಪ್ರದೀಪ್, ನಾವೂರು ಹಾಗೂ ರಮಾನಂದ ಶರ್ಮ ಭಾರದ್ವಾಜ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಶರತ್ ಕೃಷ್ಣ ಪಡುವೆಟ್ಟಾಯ, ಎಸ್‌ಕೆಡಿಆಡಿಪಿಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ಕುಮಾರ್ ಮೊದಲಾದವರು ಭಾಗವಹಿಸಲಿದ್ದಾರೆ.ರಾತ್ರಿ9ರಿಂದ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಸಾರ್ವಜನಿಕಅನ್ನಸಂತರ್ಪಣೆ ನಡೆಯಲಿದೆ. ಸೆ. 16ರಂದು ಬೆಳಗ್ಗೆ 8.09ಕ್ಕೆಗಣಹೋಮ, 8.30ಕ್ಕೆ ರಂಗಪೂಜೆ ನಡೆಯಲಿದೆ. ಬೆಳಗ್ಗೆ10ಕ್ಕೆ ರಾಜ್ಯ ಮಟ್ಟದ ಗುಂಪು ನೃತ್ಯ ಸ್ಪರ್ಧೆ ಅನೃತ್ಯ ವೈಭವುನಡೆಯಲಿದೆ. ಮಧ್ಯಾಹ್ನ 1ಕ್ಕೆ ಪಲ್ಲಪೂಜೆ, ಮಹಾಪೂಜೆ ಹಾಗೂಪ್ರಸಾದ ವಿತರಣೆ ನಡೆಯಲಿದ್ದು, ಸಂಜೆ 4ಕ್ಕೆ ರಂಗಪೂಜೆ ಮತ್ತು ಸಂಜೆ 5ಕ್ಕೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ನಂತರ ವೈಭವದ ಶೋಭಾಯಾತ್ರೆ ನಡೆಯಲಿದ್ದು, ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಪವಿತ್ರ ನದಿಯಲ್ಲಿ, ಸತ್ಯದ ಮೂಲ ದೇವಾಲಯದ ಎದುರು ಗಣಪತಿ ಮೂರ್ತಿಯ ವಿಸರ್ಜನೆ ನೆರವೇರಲಿದೆ. ಮೂರು ದಿನಗಳ ಈ ಸುವರ್ಣ ಮಹೋತ್ಸವದಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ವಿನಂತಿಸಿದ್ದಾರೆ.









