






ಪುಂಜಾಲಕಟ್ಟೆ: ಜೆಸಿಐ ಉಜಿರೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆ (ಕೆಪಿಎಸ್) ಇವರ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 10ರಂದು ವಿದ್ಯಾರ್ಥಿಗಳಿಗಾಗಿ “ಸಾಮಾಜಿಕ ಜಾಲತಾಣಗಳ ಉಪಯೋಗ ವರವೋ ಅಥವಾ ಶಾಪವೋ” ಎಂಬ ವಿಷಯದ ಕುರಿತು ಭಾಷಣ ಸ್ಪರ್ಧೆಯು ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಸ್ಪರ್ಧೆಯಲ್ಲಿ ವಂದನಾ ಅವರು ಪ್ರಥಮ ಸ್ಥಾನ ಪಡೆದರೆ, ಅಮೂಲ್ಯ ಎಸ್. ಕುಲಾಲ್ ದ್ವಿತೀಯ ಹಾಗೂ ಚೈತ್ರ ತೃತೀಯ ಬಹುಮಾನವನ್ನು ತಮ್ಮದಾಗಿಸಿಕೊಂಡರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜಿನಿ ಆಚಾರ್ ಅವರು ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರದೊಂದಿಗೆ ನಗದು ಬಹುಮಾನವನ್ನು ವಿತರಿಸಿ ಶುಭ ಹಾರೈಸಿದರು.



ಸ್ಪರ್ಧೆಯ ನಿರ್ಣಾಯಕರಾಗಿ ಅರ್ಥಶಾಸ್ತ್ರ ಉಪನ್ಯಾಸಕಿ ಡಾ. ವಾಸಂತಿ, ಇತಿಹಾಸ ಉಪನ್ಯಾಸಕಿ ಅನ್ನಪೂರ್ಣ ಹಾಗೂ ಆಂಗ್ಲ ಭಾಷೆ ಉಪನ್ಯಾಸಕಿ ಸುನೀತಾ ಕೆ. ಅವರು ಸಹಕರಿಸಿದರು. ಗಣಕ ವಿಜ್ಞಾನ ಉಪನ್ಯಾಸಕಿ ಭುವನೇಶ್ವರಿ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು.
ಲೆಕ್ಕಶಾಸ್ತ್ರ ಉಪನ್ಯಾಸಕಿ ಹೇಮಾವತಿ ಕಾರ್ಯಕ್ರಮವನ್ನು ನಿರೂಪಿಸಿ ಅಚ್ಚುಕಟ್ಟಾಗಿ ನಿರ್ವಹಿಸಿದರು. ಕನ್ನಡ ಉಪನ್ಯಾಸಕಿ ಗೀತಾ ವಂದನಾರ್ಪಣೆಗೈದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಯಿತು.









