ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಶಾಲಾ ಮಟ್ಟದ ಸ್ಪರ್ಧೆಗಳ ಉದ್ಘಾಟನೆ

0

​ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಂತಿವನ ಟ್ರಸ್ಟ್ ವತಿಯಿಂದ ಕೊಡಮಾಡುವ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಶಾಲಾ ಮಟ್ಟದ ವಿವಿಧ ಸ್ಪರ್ಧೆಗಳ ಉದ್ಘಾಟನಾ ಸಮಾರಂಭವು ವಿಧ್ಯುಕ್ತವಾಗಿ ನೆರವೇರಿತು.​

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸರಕಾರಿ ಪ್ರೌಢಶಾಲೆ ಪುತ್ತಿಲ ಇಲ್ಲಿನ ಮುಖ್ಯೋಪಾಧ್ಯಾಯ ರಾಧಾಕೃಷ್ಣ ತಚ್ಚಮೆ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಜ್ಞಾನ ಮತ್ತು ಅದನ್ನು ಪಡೆಯುವ ವಿಧಾನ, ಗುರಿ ಸಾಧಿಸುವ ಹಾದಿ, ಶಾಂತಿವನ ಟ್ರಸ್ಟ್ ಪುಸ್ತಕಗಳಿಂದ ದೊರೆಯುವ ಜೀವನಾನುಭವಗಳು ಹಾಗೂ ನೈತಿಕ ಮೌಲ್ಯಾಧಾರಿತ ಶಿಕ್ಷಣದ ಅಗತ್ಯತೆಯ ಕುರಿತು ತಿಳಿಸಿದರು.

ಅಲ್ಲದೆ, ಉತ್ತಮ ಸ್ನೇಹಿತರ ಆಯ್ಕೆ, ಸಂಸ್ಕಾರ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕುರಿತು ಹಲವು ಮಾರ್ಮಿಕ ಉದಾಹರಣೆಗಳೊಂದಿಗೆ ವಿವರಿಸಿದರು.​ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ., ಈ ಪುಸ್ತಕಗಳು ಬದುಕಿಗೆ ಬೇಕಾದ ಪ್ರತಿಯೊಂದು ವಿಚಾರವನ್ನು ಧಾರೆೆ ಎರೆಯುವುದರ ಜೊತೆಗೆ, ಗುರಿ ತಲುಪಲು ಸೂಕ್ತ ಹಾದಿ ತೋರಿಸುತ್ತವೆ ಮತ್ತು ಜೀವನಕ್ಕೆ ಬೇಕಾದ ಮೌಲ್ಯಗಳನ್ನು ಒದಗಿಸುತ್ತವೆ ಎಂದು ಉದಾಹರಣೆ ಸಹಿತ ತಿಳಿಸಿದರು.​

ಶಾಲಾ ವಿದ್ಯಾರ್ಥಿನಿ ಕುಮಾರಿ ಶ್ರೇಯ ಡಿ.ಪಿ. ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ಅನ್ಸಾ ಸ್ವಾಗತಿಸಿ, ಆರುಷ್ ಪಿ. ಜೋಶಿ ಅತಿಥಿಗಳ ಕಿರು ಪರಿಚಯ ಮಾಡಿದರು. ಸಿಂಚನ ವಂದನಾರ್ಪಣೆಗೈದರು. ಉದ್ಘಾಟನಾ ಸಮಾರಂಭದ ಬಳಿಕ ಶ್ಲೋಕ, ಭಾಷಣ, ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು ನಡೆಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಯಶಸ್ವಿಗೊಳಿಸಿದರು.

LEAVE A REPLY

Please enter your comment!
Please enter your name here