






ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೊಗ್ರು ಗ್ರಾಮದ ಮುಗೇರಡ್ಕ ದಂಬೆತ್ತಿಮಾರು ಚಂದ್ರಹಾಸ ಅವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ, ಆರೋಗ್ಯವನ್ನು ವಿಚಾರಿಸಿದರು.


ಬಳಿಕ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಅವರಿಗೆ ವೀಲ್ ಚೇರ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಬಂದಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಬ್ಬಸ್ ಬಟ್ಲಡ್ಕ, ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಾಧವ ಪೂಜಾರಿ, ಉದ್ಯಮಿಗಳಾದ ಪ್ರಸಾದ್ ಕಡ್ತಿಲ ಹಾಗೂ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.









