ನಾರ್ಯ ಅಂಗನವಾಡಿ ಕಾರ್ಯಕರ್ತೆ ಜಾನಕಿ ಅವರಿಗೆ 38 ವರ್ಷ ಸೇವೆಯ ನಂತರ ಹೃದಯಸ್ಪರ್ಶಿ ಬೀಳ್ಕೊಡುಗೆ – ಸಿದ್ಧಿ ವಿನಾಯಕ ಸ್ತ್ರೀ ಶಕ್ತಿ ಸಂಘದಿಂದ ಸನ್ಮಾನ

0

ಧರ್ಮಸ್ಥಳ: ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ನಾರ್ಯ ಅಂಗನವಾಡಿ ಕಾರ್ಯಕರ್ತೆಯಾದ ಜಾನಕಿ ಅವರು ಕಳೆದ 38 ವರ್ಷಗಳ ಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ ಅವಿರತ ಸೇವೆ ಸಲ್ಲಿಸಿ ಆಗಸ್ಟ್ 31 ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.

ಇವರ ಈ ಸುದೀರ್ಘ ಸೇವೆಯನ್ನು ಗುರುತಿಸಿ ನಾರ್ಯದ ಶ್ರೀ ಸಿದ್ಧಿ ವಿನಾಯಕ ಸ್ತ್ರೀ ಶಕ್ತಿ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.ಜಾನಕಿ ಅವರು ನಾರ್ಯ ಅಂಗನವಾಡಿಯಲ್ಲಿ ಒಟ್ಟು 18 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಅವರ ಸೇವಾ ಅವಧಿಯಲ್ಲಿ ಮಕ್ಕಳ ಪಾಲನೆ, ಪೌಷ್ಟಿಕಾಂಶ, ತಾಯಂದಿರಿಗೆ ಮಾರ್ಗದರ್ಶನ ನೀಡುವಲ್ಲಿ ತೋರಿದ ಬದ್ಧತೆ ಅನನ್ಯ. ಸನ್ಮಾನ ಕಾರ್ಯಕ್ರಮದಲ್ಲಿ ಶ್ರೀ ಶಕ್ತಿ ಸಂಘದ ಸದಸ್ಯರು ಜಾನಕಿ ಅವರ ಉತ್ತಮ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅನಿಸಿಕೆ ಹಂಚಿಕೊಂಡರು.

ಅವರ ನಿವೃತ್ತಿ ಜೀವನವು ಆರೋಗ್ಯ, ನೆಮ್ಮದಿ ಹಾಗೂ ಸಂತೋಷದಿಂದ ಕೂಡಿರಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಅಂಗನವಾಡಿ ಸಹಾಯಕಿ ವಿಮಲಾ, ಪುಟಾಣಿ ಮಕ್ಕಳು, ದುಂಡೋಲೆ ಅಂಗನವಾಡಿ ಕಾರ್ಯಕರ್ತೆ ಸುಮಿತ್ರ ಶ್ರೀ ಸಿದ್ಧಿ ವಿನಾಯಕ ಸ್ತ್ರೀ ಶಕ್ತಿ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಸುಗುಣ ಸ್ವಾಗತಿಸಿ, ಉಮಾವತಿ,ವಂದಿಸಿದರು.

LEAVE A REPLY

Please enter your comment!
Please enter your name here