ಶಿಶಿಲ ಆರೋಗ್ಯ ಉಪ ಕೇಂದ್ರದ ಸಮಸ್ಯೆ ಪರಿಶೀಲಿಸಿದ ತಾಲೂಕು ಆರೋಗ್ಯಾಧಿಕಾರಿ

0

ಶಿಶಿಲ: ಶಿಶಿಲ ಆರೋಗ್ಯ ಉಪ ಕೇಂದ್ರದ ಮೂಲಭೂತ ಸೌಕರ್ಯಗಳ ಕೊರತೆ ಕುರಿತು ಅಡ್ಡಹಳ್ಳ ಫ್ರೆಂಡ್ಸ್ ವತಿಯಿಂದ ಸಲ್ಲಿಸಿದ ಮನವಿಗೆ ಸ್ಪಂದಿಸಿದ ತಾಲೂಕು ಆರೋಗ್ಯಾಧಿಕಾರಿಗಳು ಬುಧವಾರ ಸ್ಥಳಕ್ಕೆ ಆಗಮಿಸಿ, ಆರೋಗ್ಯ ಉಪ ಕೇಂದ್ರದಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿದರು.

ಆರೋಗ್ಯ ಉಪ ಕೇಂದ್ರದ ಸೀಲಿಂಗ್ ಹಾಳಾಗಿ ಕುಸಿಯುವ ಸ್ಥಿತಿಯಲ್ಲಿರುವುದು, ಫ್ಯಾನ್ ಸರಿಯಾಗಿ ಕಾರ್ಯನಿರ್ವಹಿಸದಿರುವುದು ಹಾಗೂ ಶೌಚಾಲಯದ ವ್ಯವಸ್ಥೆ ಸಮರ್ಪಕವಾಗಿಲ್ಲದಿರುವ ಕುರಿತು ಮನವಿಯಲ್ಲಿ ತಿಳಿಸಲಾಗಿತ್ತು.ಮನವಿಗೆ ಸ್ಪಂದಿಸಿ ಕೂಡಲೇ ಸ್ಥಳಕ್ಕೆ ಆಗಮಿಸಿದ ತಾಲೂಕು ಆರೋಗ್ಯಾಧಿಕಾರಿಗಳು ಕೇಂದ್ರದ ಸೀಲಿಂಗ್, ಫ್ಯಾನ್ ಹಾಗೂ ಶೌಚಾಲಯ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು.

ಸಮಸ್ಯೆಗಳ ಕುರಿತು ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದರು.ಸಾರ್ವಜನಿಕರಿಗೆ ಹಾಗೂ ಆರೋಗ್ಯ ಸಿಬ್ಬಂದಿಗೆ ತೊಂದರೆಯಾಗದಂತೆ ಆರೋಗ್ಯ ಉಪ ಕೇಂದ್ರದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಶೀಘ್ರವಾಗಿ ಕಲ್ಪಿಸಬೇಕು ಎಂದು ಅಡ್ಡಹಳ್ಳ ಫ್ರೆಂಡ್ಸ್ ಒತ್ತಾಯಿಸಿದೆ.

LEAVE A REPLY

Please enter your comment!
Please enter your name here