






ಬೆಳ್ತಂಗಡಿ: ಅಳದಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಸೆ. 15ರಂದು ನಡೆದ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಅಳದಂಗಡಿ ಸರಕಾರಿ ಪ್ರೌಢಶಾಲೆಯ ಬಾಲಕರ ಹಾಗೂ ಬಾಲಕಿಯರ ತಂಡಗಳು ಉತ್ತಮ ಸಾಧನೆ ಮಾಡಿವೆ.ಬಾಲಕರ ವಿಭಾಗದಲ್ಲಿ ವೇಣೂರು ತಂಡವನ್ನು ರೋಚಕ ಹಾಗೂ ಜಿದ್ದಾಜಿದ್ದಿನ ಪಂದ್ಯದಲ್ಲಿ ಸೋಲಿಸಿದ ಅಳದಂಗಡಿ ಸರಕಾರಿ ಪ್ರೌಢಶಾಲೆಯ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತು.


ಬಾಲಕಿಯರ ವಿಭಾಗದಲ್ಲಿ ಸೇಂಟ್ ಪೀಟರ್ ಶಾಲೆ ಅಳದಂಗಡಿ ತಂಡವನ್ನು ಮಣಿಸಿ ಅಳದಂಗಡಿ ಸರಕಾರಿ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಗಳಿಸಿದೆ.ಈ ಮೂಲಕ ಎರಡೂ ತಂಡಗಳು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.









