






ಉಜಿರೆ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ನಿಟ್ಟಡೆ, ವೇಣೂರುನಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಕ್ರೀಡಾಕೂಟದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮದ 14 ರ ವಯೋಮಾನದ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಉತ್ತಮ ರನ್ನರ್ ಆಗಿ ಅನಿಶಾ ಹಾಗೂ ಉತ್ತಮ ಚೇಸರ್ ಆಗಿ ಸನ್ಮಯ ಪ್ರಶಸ್ತಿ ಪಡೆದುಕೊಂಡರು. ತಂಡವನ್ನು ಶಾಲಾ ಸಂಚಾಲಕರು, ಪ್ರಾಂಶುಪಾಲರು, ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಶುಭ ಹಾರೈಸಿದ್ದಾರೆ.









