






ಪದ್ಮುಂಜ: ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರಾಯ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟವು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಪುರುಷೋತ್ತಮ ಗೌಡ ಅವರ ಅಧ್ಯಕ್ಷತೆಯಲ್ಲಿ ಅದ್ಧೂರಿಯಾಗಿ ಉದ್ಘಾಟನೆಗೊಂಡಿತು.
ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸುಮತಿ ಪಿ.ಎನ್., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾರಾಯಣ ಗೌಡ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕೃಷ್ಣಪ್ಪ ಪೂಜಾರಿ ಇಳಂತಿಲ, ಗ್ರಾ.ಪಂ. ಮಾಜಿ ಅಧ್ಯಕ್ಷ ಸೀತಾರಾಮ ಮಡಿವಾಳ, ಪುರಂದರ ಶೆಟ್ಟಿ ಪಣೆಕ್ಕರ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪ್ರದೀಪ್ ಆಳ್ವ ಮುಗೆರೋಡಿ ಹಾಗೂ ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಗೀತಾ ಶೆಟ್ಟಿ ಉಪಸ್ಥಿತರಿದ್ದರು.ಜೊತೆಗೆ ಸದಾಶಿವ ಶೆಟ್ಟಿ ಜೋಗಿ, ಸುಮತಿ ಶೆಟ್ಟಿ ಪದ್ಮುಂಜ, ಸಂಘದ ಉಪಾಧ್ಯಕ್ಷ ನಿರಂಜನ್ ಹಾಗೂ ದೈಹಿಕ ಶಿಕ್ಷಕರಾದ ಸಿದ್ದಿಖ್, ವಿಶ್ವನಾಥ ಮತ್ತು ಮಂಜುನಾಥ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಶಿಸ್ತಿಗೆ ಆಧ್ಯತೆ: ವಲಯ ಸಂಯೋಜಕರಾದ ರವಿರಾಜ್ ರವರು ಮಾತನಾಡಿ, “ಪಂದ್ಯದ ಶಿಸ್ತು ಮತ್ತು ನಿಯಮಗಳಲ್ಲಿ ಯಾವುದೇ ರಾಜಿ ಇಲ್ಲ. ಎಲ್ಲರೂ ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಸಹಕರಿಸಬೇಕು” ಎಂದು ಕರೆ ನೀಡಿದರು.
ದಾನಿಗಳ ಸನ್ಮಾನ: ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಸಹಕರಿಸಿದ ದಾನಿಗಳನ್ನು ಗುರುತಿಸಿ ಗೌರವಿಸುವ ಸತ್ಕಾರ್ಯವನ್ನು ಶಿಕ್ಷಕಿ ತೇಜಾ ಅವರು ನಡೆಸಿಕೊಟ್ಟರು.
ಶಾಲೆಯ ಮುಖ್ಯ ಶಿಕ್ಷಕರಾದ ಬೀರಾದರ್ ಸ್ವಾಗತಿಸಿದರು. ಶಿಕ್ಷಕಿ ಕೀರ್ತಿ ಧನ್ಯವಾದ ಸಮರ್ಪಿಸಿದರು. ಶಿಕ್ಷಕ ನಾರಾಯಣ ಗೌಡ ಮತ್ತು ಪ್ರೇಮನಾಥ್ ಕಾರ್ಯಕ್ರಮವನ್ನು ನಿರೂಪಿಸಿದರು.









