ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಗೆ ಸಮಗ್ರ ದ್ವಿತೀಯ ಚಾಂಪಿಯನ್ ಶಿಪ್

0

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಬೆಳ್ತಂಗಡಿಯ ಕಬ್, ಬುಲ್‌ಬುಲ್, ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳು ಭಾಗವಹಿಸಿದ ಜಿಲ್ಲಾ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಗೀತ ಗಾಯನ ಸ್ಪರ್ಧೆಯಲ್ಲಿ ಸಮಗ್ರ ದ್ವಿತೀಯ ಸ್ಥಾನ ಹಾಗೂ ಚಾಂಪಿಯನ್‌ಶಿಪ್ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೀಳಾ ಪೂಜಾರಿ, ಕೋಶಾಧಿಕಾರಿ ಬೆಳಿಯಪ್ಪ ಕೆ. ಹಾಗೂ ಎಲ್ಲಾ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿ, ವಿದ್ಯಾರ್ಥಿಗಳ ಮುಂದಿನ ಸಾಧನೆಗಳಿಗೆ ಶುಭ ಹಾರೈಸಿದ್ದಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು, ಸ್ಕೌಟ್–ಗೈಡ್ ಶಿಕ್ಷಕರು ಹಾಗೂ ಮಾರ್ಗದರ್ಶಕರಿಗೂ ಸಂಸ್ಥೆಯ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here