ತುಳು ಭಾಷೆಗೆ ಅಧಿಕೃತ ಮಾನ್ಯತೆ, ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ₹1 ಕೋಟಿ ಅನುದಾನ: ರಾಜ್ಯ ಸರ್ಕಾರದ ಐತಿಹಾಸಿಕ ನಿರ್ಧಾರಗಳಿಗೆ ಅಭಿನಂದನೆಗಳು: ನಾಗೇಶ್ ಕುಮಾರ್ ಗೌಡ

0

ಬೆಳ್ತಂಗಡಿ:ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವುದರ ಮೂಲಕ ತುಳುನಾಡಿನ ಜನರ ಬಹುದಿನದ ಬೇಡಿಕೆ ಈಡೇರಿಸಿದ್ದಲ್ಲದೆ, ಧಾರ್ಮಿಕ ಕ್ಷೇತ್ರ ಶ್ರೀರಾಮ ಕ್ಷೇತ್ರ ಕನ್ಯಾಡಿಗೆ ರೂ.1 ಕೋಟಿ ರೂಪಾಯಿ ಅನುದಾನ ಘೋಷಿಸಿದ ರಾಜ್ಯ ಸರ್ಕಾರಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗ್ರಾಮೀಣ ನಾಗೇಶ್ ಕುಮಾರ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕರಾವಳಿ ಭಾಗದ ಕೋಟ್ಯಂತರ ತುಳು ಭಾಷಿಕರ ಭಾವನೆಯಾಗಿದ್ದ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿರುವುದು ಅಭಿನಂದನರ್ಹ.ತುಳು ಭಾಷಾ ಮಾನ್ಯತೆಗಾಗಿ ಶ್ರಮಿಸಿದ ಕರಾವಳಿ ಭಾಗದ ಭಾಷಾ ಪ್ರೇಮಿಗಳು, ಸಾಹಿತಿಗಳು, ಸಂಘ-ಸಂಸ್ಥೆಗಳು ಹಾಗೂ ಕನ್ಯಾಡಿ ಕ್ಷೇತ್ರದ ಅಭಿವೃದ್ಧಿಗೆ ಬೆಂಬಲ ನೀಡಿದ ರಾಜ್ಯ ಸರ್ಕಾರದ ಎಲ್ಲಾ ಸಚಿವರಿಗೂ ಅಭಿನಂದನೆಗಳು.

LEAVE A REPLY

Please enter your comment!
Please enter your name here