ಬೆಳ್ತಂಗಡಿ ತಾಲೂಕು ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಕೊಯ್ಯೂರು ಸರ್ಕಾರಿ ಶಾಲೆಗೆ ತೃತೀಯ ಸ್ಥಾನ

0

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ನಿಟ್ಟಡೆ ಶಾಲೆಯಲ್ಲಿ ನಡೆದ 2026ನೇ ಸಾಲಿನ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕರ ಖೋ-ಖೋ ಪಂದ್ಯಾಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಯ್ಯೂರು ಶಾಲೆಯ ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಮುಖ್ಯೋಪಾಧ್ಯಾಯಿನಿ ವೀಣಾ ಎಂ., ಎಸ್.ಡಿ.ಎಂ.ಸಿ. ಅಧ್ಯಕ್ಷ ವಿನಯ ಕೆ., ಶಾಲಾ ಶಿಕ್ಷಕ ವೃಂದ, ಪೋಷಕ ವರ್ಗ ಹಾಗೂ ಎಸ್.ಡಿ.ಎಂ.ಸಿ.ಯ ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here