







ಬೆಳ್ತಂಗಡಿ: ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಅವರ ಅಧ್ಯಕ್ಷತೆಯಲ್ಲಿ ಸೆ. 19ರಂದು ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪದ್ಮನಾಭ ಸಾಲ್ಯಾನ್ ಅವರು “ಮಾತೆಗ್ಲ್ ಸೊಲ್ಮೆಲು” ಎಂದು ತುಳುವಿನಲ್ಲಿ ಮಾತು ಆರಂಭಿಸಿದರು. ತುಳು ಭಾಷೆಗೆ ಐತಿಹಾಸಿಕ ಗೌರವ ದೊರೆತಿರುವುದು ಹರ್ಷ ತಂದಿದೆ.


ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳುವನ್ನು ಘೋಷಿಸಿರುವ ಸರ್ಕಾರಕ್ಕೆ ಕೃತಜ್ಞತೆಗಳು. ಜಾತಿ ಭೇದ ಮರೆತು ಒಂದೇ ತಾಯಿಯ ಮಕ್ಕಳಂತೆ ಬದುಕುವವರು ತುಳುವರು ಎಂದು ಹೇಳಿದ ಅವರು, ಸರ್ಕಾರ ಮನೆ ಬಾಗಿಲಿಗೆ ಬಂದು ಜನರ ಸಮಸ್ಯೆ ಆಲಿಸುವ ವ್ಯವಸ್ಥೆಯಾಗಿದೆ ಎಂದರು.
ಸಭೆಯಲ್ಲಿ ತಹಶೀಲ್ದಾರ್ ಎಸ್. ಎನ್. ನರಗುಂದ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಕೆಡಿಪಿ ಸದಸ್ಯರು, ತಾಲೂಕು ಮಟ್ಟದ ಇಲಾಖಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು. ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ತಮ್ಮ ಅಹವಾಲುಗಳನ್ನು ಸಲ್ಲಿಸಿದರು.









